ಬೆಂಗಳೂರು: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ (ಡಿಎಚ್‌ಟಿಟಿ) ಕೋರ್ಸ್ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿರುತ್ತದೆ. ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ₹ 2,500 ರಂತೆ ಶಿಷ್ಯವೇತನ ನೀಡಲಾಗುವುದು. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗರಿಷ್ಠ ವಯೋಮಿತಿ 23 ವರ್ಷವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 25 ವರ್ಷವಾಗಿರುತ್ತದೆ. ಮೇ 31ರ ಒಳಗೆ ಅರ್ಜಿ ಸಲ್ಲಿಸಬೇಕು.
ಆಸಕ್ತರು ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ದೂರವಾಣಿ ಸಂ: 08372-297221 ಮೊಬೈಲ್ ಸಂಖ್ಯೆ: 9449162822 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರನ್ನು ಸಂಪರ್ಕಿಸಬಹುದಾಗಿದೆ.
ಅರ್ಜಿಗಳನ್ನು ಆನ್‍ಲೈನ್‍ನಲ್ಲಿ https:// khtigadag.ac.in/AdmissionForm.pdf ಲಿಂಕ್ ಮೂಲಕ ಡೌನ್‍ಲೊಡ್ ಮಾಡಿಕೊಳ್ಳಬಹುದು ಎಂದು ಕೈಮಗ್ಗ ಮತ್ತು ಜವಳಿ ಅಭಿವೃದ್ಧಿ ಆಯುಕ್ತರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.