ADVERTISEMENT

ಮತಾಂತರ ನಿಷೇಧ ಕಾಯ್ದೆ ರದ್ದು: ಆರ್ಚ್ ಬಿಷಪ್ ಸ್ವಾಗತ

​ಪ್ರಜಾವಾಣಿ ವಾರ್ತೆ
Published 15 ಜೂನ್ 2023, 20:13 IST
Last Updated 15 ಜೂನ್ 2023, 20:13 IST
ಚರ್ಚ್‌
ಚರ್ಚ್‌    

ಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ– 2021 (ಮತಾಂತರ ನಿಷೇಧ ಕಾಯ್ದೆ) ರದ್ದುಗೊಳಿಸಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಸ್ವಾಗತಿಸುವುದಾಗಿ ಬೆಂಗಳೂರಿನ ಆರ್ಚ್ʼಬಿಷಪ್ ಪೀಟರ್ ಮಚಾದೊ ತಿಳಿಸಿದ್ದಾರೆ.

ವ್ಯಕ್ತಿಗಳ ಮೂಲಭೂತ ಹಕ್ಕುಗಳನ್ನು ಸಂರಕ್ಷಿಸುವುದರ ಪ್ರಾಮುಖ್ಯದ ಕುರಿತು ಅನೇಕ ವ್ಯಕ್ತಿಗಳು ಹಾಗೂ ಪ್ರಗತಿಪರ ಸಂಘಟನೆಗಳು ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನು ಸರ್ಕಾರ ಪರಿಗಣಿಸಿರುವುದು ಸ್ವಾಗತಾರ್ಹ ಹೆಜ್ಜೆ. ಈ ಕಾಯ್ದೆಯು ವ್ಯಕ್ತಿಗಳ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿತ್ತು ಎಂದು ಹೇಳಿದ್ದಾರೆ.

ಸಂವಿಧಾನದ 25ನೇ ಅನುಚ್ಛೇಧದಲ್ಲಿ ನೀಡಿಲಾಗಿರುವ ಇಷ್ಟದ ಧರ್ಮವನ್ನು ಅನುಸರಿಸುವ ಹಾಗೂ ಅದನ್ನು ಪ್ರಚಾರ ಮಾಡುವ ಹಕ್ಕುಗಳ ವಿರುದ್ಧವೂ ಇತ್ತು. ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಜಾರಿಗೆ ತಂದಿದ್ದ ಈ ಕಾಯ್ದೆಯಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಕ್ರೈಸ್ತರ ಮೇಲೆ ದಾಳಿ ಮಾಡುವಂತೆ ಪ್ರೇರೇಪಿಸಿತ್ತು ಎಂದು ಕರ್ನಾಟಕ ಪ್ರಾಂತ್ಯ ಕಥೋಲಿಕ ಧರ್ಮಾಧ್ಯಕ್ಷರ ಮಂಡಳಿ, ಅಖಿಲ ಕರ್ನಾಟಕ ಕ್ರೈಸ್ತ ಮಾನವ ಹಕ್ಕುಗಳ ಒಕ್ಕೂಟ ವೇದಿಕೆ ಅಧ್ಯಕ್ಷರೂ ಆಗಿರುವ ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.