ADVERTISEMENT

ಲಲಿತಕಲಾ ಅಕಾಡೆಮಿ: ಕಲಾ ಸ್ಪರ್ಧೆ, ಪ್ರದರ್ಶನಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2024, 20:52 IST
Last Updated 22 ಆಗಸ್ಟ್ 2024, 20:52 IST
<div class="paragraphs"><p> ಚಿತ್ರಕಲಾ ಶಿಬಿರದಲ್ಲಿ ಕಲಾವಿದರು ಚಿತ್ರಗಳನ್ನು ಬಿಡಿಸುವಲ್ಲಿ ಮಗ್ನರಾಗಿರುವುದು</p></div>

ಚಿತ್ರಕಲಾ ಶಿಬಿರದಲ್ಲಿ ಕಲಾವಿದರು ಚಿತ್ರಗಳನ್ನು ಬಿಡಿಸುವಲ್ಲಿ ಮಗ್ನರಾಗಿರುವುದು

   

ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಯು 52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. 

ಒಟ್ಟು 10 ಕಲಾಕೃತಿಗಳ ಕಲಾವಿದರಿಗೆ ತಲಾ ₹ 25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ನೀಡಲಾಗುತ್ತದೆ. ಪ್ರವೇಶ ಶುಲ್ಕ ₹ 300 ನಗದು ರೂಪದಲ್ಲಿ ಅಥವಾ ಡಿಡಿ ಮೂಲಕ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಪಾವತಿಸಬೇಕಾಗುತ್ತದೆ.

ADVERTISEMENT

ಭರ್ತಿ ಮಾಡಿದ ಅರ್ಜಿ ನಮೂನೆಯ ಜತೆಗೆ ಕಲಾಕೃತಿಯ ಛಾಯಾಚಿತ್ರ ಹಾಗೂ ದಾಖಲಾತಿಗಳನ್ನು ಸೆ.21ರ ಒಳಗೆ ಇ ಮೇಲ್ ವಿಳಾಸ kla.karnataka@gmail.comಗೆ ಕಳುಹಿಸಬೇಕು. ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು–560002 ಈ ವಿಳಾಸಕ್ಕೆ ನೇರವಾಗಿ ಅಥವಾ ಅಂಚೆಯ ಮೂಲಕ ಸಲ್ಲಿಸಬಹುದಾಗಿದೆ. ಲಕೋಟೆಯ ಮೇಲೆ 52ನೇ ವಾರ್ಷಿಕ ಕಲಾ ಪ್ರದರ್ಶನಕ್ಕಾಗಿ ಅರ್ಜಿ ಎನ್ನುವುದನ್ನು ಸ್ಪಷ್ಟವಾಗಿ ಸಮೂದಿಸಿರಬೇಕು.

ವಿವರಕ್ಕೆ www.lalitkala.karnataka.gov.inಗೆ ಭೇಟಿ ನೀಡಿ ಎಂದು ಪ್ರಕಟಣೆಯಲ್ಲಿ ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ. ಸಂಪರ್ಕಕ್ಕೆ: 080-22480297

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.