ಬೆಂಗಳೂರು: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಇದೇ 5ರಿಂದ 7ರವರೆಗೆ ಕನಕಪುರ ರಸ್ತೆಯಲ್ಲಿರುವ ತನ್ನ ಕೇಂದ್ರದಲ್ಲಿ ಕಿಸಾನ್ ಸಮೃದ್ಧಿ ಮಹೋತ್ಸವ ಹಮ್ಮಿಕೊಂಡಿದೆ.
ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ವಕ್ತಾರ ಶ್ರೀನಿವಾಸ್ ಪಟಾಪಟ್, ‘ಒಂಬತ್ತು ರಾಜ್ಯಗಳಿಂದ ಒಂದು ಸಾವಿರ ರೈತರು ಈ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಆರ್ಟ್ ಆಫ್ ಲಿವಿಂಗ್‌ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ ಗುರೂಜಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ನರೇಂದ್ರ ಸಿಂಗ್ ತೋಮರ್ ಹಾಗೂ ಗಜೇಂದ್ರ ಸಿಂಗ್ ಶೇಖಾವತ್ ಅವರು ಉಪಸ್ಥಿತರಿರಲಿದ್ದಾರೆ’ ಎಂದು ಹೇಳಿದರು.
‘ಸುಸ್ಥಿರ ಕೃಷಿ, ನದಿಗಳ ಪುನಶ್ಚೇತನ, ಅರಣ್ಯ ಕೃಷಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತಜ್ಞರಿಂದ ವಿಚಾರ ಸಂಕಿರಣ ನಡೆಸಲಾಗುತ್ತದೆ.ಸಾಧಕ ರೈತರು ತಮ್ಮ ಅನುಭವಗಳನ್ನೂ ಹಂಚಿಕೊಳ್ಳಲಿದ್ದಾರೆ. ಕೃಷಿಯಿಂದ ಅಧಿಕ ಆದಾಯ ಪಡೆಯುವಿಕೆ ಹಾಗೂ ಮಾರುಕಟ್ಟೆ ಅವಕಾಶಗಳ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಕೃಷಿ ಕ್ಷೇತ್ರದಲ್ಲಿ ಇರುವ ಅವಕಾಶಗಳು ಹಾಗೂ ಅತ್ಯಾಧುನಿಕ ತಂತ್ರಜ್ಞಾನಗಳ ಬಗ್ಗೆ ತಿಳಿಸಿಕೊಡಲಾಗುತ್ತದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.