ADVERTISEMENT

ಮೇಕೆದಾಟು: ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟ ಕಾಂಗ್ರೆಸ್‌- ಅಶೋಕ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಮಾರ್ಚ್ 2024, 7:19 IST
Last Updated 21 ಮಾರ್ಚ್ 2024, 7:19 IST
ಆರ್‌. ಅಶೋಕ್‌
ಆರ್‌. ಅಶೋಕ್‌   

ಬೆಂಗಳೂರು: ತಮಿಳುನಾಡಿನ ಡಿಎಂಕೆ ಪಕ್ಷ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಜಾರಿ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕ ಆರ್‌. ಅಶೋಕ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ. 

ವಿಪಕ್ಷ ನಾಯಕರ ರಾಹುಲ್‌ ಗಾಂಧಿ, ಡಿ.ಕೆ ಶಿವಕುಮಾರ್‌ ಅವರನ್ನು ಟ್ಯಾಗ್‌ ಮಾಡಿ ಪೋಸ್ಟ್‌ ಮಾಡಿರುವ ಅಶೋಕ್‌, ‘ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ I.N.D.I. ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ ಶಿವಕುಮಾರ್‌ ಅವರೇ ಈಗ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್‌ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್‌ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT