ADVERTISEMENT

ಆರು ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ ಬಿ–ಪ್ಯಾಕ್‌

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2019, 20:15 IST
Last Updated 14 ಏಪ್ರಿಲ್ 2019, 20:15 IST

ಬೆಂಗಳೂರು: ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ಚುನಾವಣಾ ಕಣದಲ್ಲಿ ಇರುವ 78 ಅಭ್ಯರ್ಥಿಗಳ ಪೈಕಿ 6 ಅಭ್ಯರ್ಥಿಗಳನ್ನು ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ(ಬಿ–ಪ್ಯಾಕ್‌) ಬೆಂಬಲಿಸಿದೆ.

ರಾಜಕೀಯ ಅನುಭವ, ಸಂಸದೀಯ ದಕ್ಷತೆ, ಸಾಮರ್ಥ್ಯ, ಸಾಮಾಜಿಕ ವಿಷಯಗಳಿಗೆ ಸ್ಪಂದನೆ, ಉತ್ತಮ ಆಡಳಿತಕ್ಕೆ ಬದ್ಧತೆ, ಬದಲಾವಣೆಯ ನಿಟ್ಟಿನಲ್ಲಿ ಆಲೋಚನೆ ಆಧಾರದ ಮೇಲೆ ಡಿ.ವಿ.ಸದಾನಂದಗೌಡ, ಪಿ.ಸಿ.ಮೋಹನ್, ಕೃಷ್ಣ ಬೈರೇಗೌಡ, ಬಿ.ಕೆ.ಹರಿಪ್ರಸಾದ್, ರಿಜ್ವಾನ್‌ ಅರ್ಷದ್‌ ಅವರನ್ನು ಬೆಂಬಲಿಸಲಾಗುತ್ತಿದೆ. ಯುವಕರ ಆಕಾಂಕ್ಷೆಗಳನ್ನು ಈಡೇರಿಸುವ ಸಾಮರ್ಥ್ಯಕ್ಕಾಗಿ ತೇಜಸ್ವಿ ಸೂರ್ಯ ಅವರಿಗೆ ಬೆಂಬಲ ಸೂಚಿಸಲಾಗಿದೆ ಎಂದು ಬಿ–ಪ್ಯಾಕ್‌ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT