ಬೆಂಗಳೂರು: ಡಿ.ಜೆ.ಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದಬಿಬಿಎಂಪಿ ಮಾಜಿ ಮೇಯರ್ ಸಂಪತ್‌ರಾಜ್ ಅವರ ಹಿಂಬಾಲಕ ಎಸ್.ಸಂತೋಷ್‌ಕುಮಾರ್‌ಗೆ ಹೈಕೋರ್ಟ್ ಜಾಮೀನು ನೀಡಿದೆ.
‘₹5 ಲಕ್ಷ ಮೌಲ್ಯದ ಬಾಂಡ್ ಜತೆಗೆ ಇಬ್ಬರ ಶ್ಯೂರಿಟಿ ನೀಡಬೇಕು. ಈ ರೀತಿಯ ಚಟುವಟಿಕೆಗಳನ್ನು ಭಾಗಿಯಾಗಬಾರದು, ನಿಯಮಿತವಾಗಿ ವಿಚಾರಣೆಗೆ ಹಾಜರಾಗಬೇಕು’ ಎಂದು ಜಾನ್ ಮೈಕಲ್ ಕುನ್ಹಾ ಅವರಿದ್ದ ಪೀಠ ನಿರ್ದೇಶನ ನೀಡಿತು.
‘ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವ ಕಾರಣ ಅವರ ವಿರುದ್ಧ ಎಸ್‌ಸಿ/ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆ ಜಾರಿಗಳಿಸಲು ಆಗುವುದಿಲ್ಲ. ಅವರು ಗಲಭೆ ಮಾಡಿದ್ದಾರೆ ಎಂಬುದನ್ನು ಸಾಬೀತುಪಡಿಸುವ ಪುರಾವೆಗಳಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.
2020 ನವೆಂಬರ್‌ನಲ್ಲಿ ಸಂತೋಷ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕಾರಗೊಂಡಿತ್ತು. ಆ ಸಂದರ್ಭದಲ್ಲಿ ಸಂಪತ್ ರಾಜ್ ತಲೆಮರೆಸಿಕೊಂಡಿದ್ದ ಕಾರಣಕ್ಕೆ ಜಾಮೀನು ನೀಡಿರಲಿಲ್ಲ. ಶರಣಾದ ಸಂಪತ್ ರಾಜ್ ಮತ್ತು ಇತರ ಇಬ್ಬರು ಆರೋಪಿಗಳು ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. 2020 ಆಗಸ್ಟ್ 25ರಂದು ಸಂತೋಷ್ ಬಂಧನವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.