ಬೆಂಗಳೂರು: ಮೋಡ ಕವಿದ ವಾತಾವರಣ, ಆಗಾಗ್ಗೆ ಬೀಳುವ ತುಂತುರು ಮಳೆಯ ಮಧ್ಯೆ ನಗರದಲ್ಲಿ ಮುಸ್ಲಿಮರು ಭಾನುವಾರ ಶ್ರದ್ಧೆ ಹಾಗೂ ಭಕ್ತಿಯಿಂದ ಬಕ್ರೀದ್ ಹಬ್ಬವನ್ನು ಆಚರಿಸಿದರು.
ರಾಜಧಾನಿಯ ವಿವಿಧ ಮಸೀದಿಗಳಿಗೆ ತೆರಳಿದ ಮುಸ್ಲಿಮರು, ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ದೃಶ್ಯ ಕಂಡುಬಂತು. ಪೋಷಕರೊಂದಿಗೆ ಮಕ್ಕಳೂ ಪ್ರಾರ್ಥನಾ ಮಂದಿರದತ್ತ ತೆರಳಿ ಪ್ರಾರ್ಥನೆಯಲ್ಲಿ ಭಾಗಿಯಾದರು.
ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ಕಾರಣಕ್ಕೆ ಹಬ್ಬದ ಆಚರಣೆಗೆ ಕೆಲವು ನಿರ್ಬಂಧ ಹೇರಲಾಗಿತ್ತು. ಈ ಬಾರಿ ಯಾವುದೇ ಅಡೆತಡೆಯಿಲ್ಲದೇ ಬಕ್ರೀದ್ ಆಚರಿಸಲಾಗುತ್ತಿದೆ. ಮಸೀದಿಗಳ ಸುತ್ತಮುತ್ತ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.