ADVERTISEMENT

‘ಬಾಲಬ್ರೂಯಿ ಅತಿಥಿ ಗೃಹ ಇದ್ದಂತೆಯೇ ಉಳಿಸಿ’

​ಪ್ರಜಾವಾಣಿ ವಾರ್ತೆ
Published 24 ಜುಲೈ 2023, 23:02 IST
Last Updated 24 ಜುಲೈ 2023, 23:02 IST
ಬೆಂಗಳೂರಿನ ಬಾಲಬ್ರೂಯಿ ಅತಿಥಿ ಗೃಹ
ಬೆಂಗಳೂರಿನ ಬಾಲಬ್ರೂಯಿ ಅತಿಥಿ ಗೃಹ   

ಬೆಂಗಳೂರು: ‘ಬಾಲಬ್ರೂಯಿ ಅತಿಥಿ ಗೃಹವನ್ನು ಸಂವಿಧಾನಿಕ ಕ್ಲಬ್‌ ಆಗಿ ಪರಿವರ್ತಿಸಬಾರದು. ಈ ಪಾರಂಪರಿಕ ಕಟ್ಟಡವನ್ನು ಯಥಾವತ್ತಾಗಿ ಉಳಿಸಿಕೊಂಡು ಸರ್ಕಾರಿ ಅತಿಥಿ ಗೃಹವನ್ನಾಗಿ ನಿರ್ವಹಿಸಿಕೊಂಡು ಹೋಗಬೇಕು’ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಗ್ರಹಿಸಿದ್ದಾರೆ.

‘ಬಾಲಬ್ರೂಯಿ ಅತಿಥಿ ಗೃಹದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ, ಡಾ.ಬಿ.ಆರ್. ಅಂಬೇಡ್ಕರ್, ರಾಷ್ಟ್ರಕವಿ ರವೀಂದ್ರನಾಥ್ ಟ್ಯಾಗೊರ್ ತಂಗಿದ್ದ ಇತಿಹಾಸವಿದೆ. ಈ ಅತಿಥಿ ಗೃಹದ ಆವರಣದಲ್ಲಿರುವ ಅಪರೂಪದ 350 ಹಳೆಯ ಮರಗಳಿವೆ. ಅವುಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT