ಬೆಂಗಳೂರು: ಬಲಿಜ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಕಲ್ಪಿಸುವ ನಿರ್ಧಾರವನ್ನು ಬೆಳಗಾವಿ ಅಧಿವೇಶನದಲ್ಲಿ ಕೈಗೊಳ್ಳದಿದ್ದರೆ ಚಿಕ್ಕಬಳ್ಳಾಪುರ ಜಿಲ್ಲೆ ಕೈವಾರದಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಲಾಗುವುದು ಎಂದು ರಾಜ್ಯ ಸಮಗ್ರ ಬಲಿಜ ವೇದಿಕೆ ರಾಜ್ಯ ಕಾರ್ಯದರ್ಶಿ ಎಸ್.ರಮೇಶ್ ತಿಳಿಸಿದ್ದಾರೆ.
ಬಲಿಜ ಸಮುದಾಯವು ಶಿಕ್ಷಣದ ವಿಷಯದಲ್ಲಿ 2ಎ ಮೀಸಲಾತಿ ಪಡೆಯುತ್ತಿದ್ದರೆ, ರಾಜಕೀಯವಾಗಿ 3ಎ ಮೀಸಲಾತಿ ಪಡೆಯುತ್ತಿದೆ. ಒಂದು ಸಮುದಾಯವನ್ನು ಈ ರೀತಿಯ ಅತಂತ್ರ ಸ್ಥಿತಿಗೆ ತಳ್ಳಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
‘28 ವರ್ಷಗಳಿಂದ ಈ ಸಮುದಾಯಕ್ಕೆ ದ್ರೋಹ ಎಸಗಲಾಗಿದೆ. ನ್ಯಾಯಮೂರ್ತಿ ಭಕ್ತವತ್ಸಲಂ ವರದಿ ಪ್ರಕಾರ ರಾಜ್ಯದಲ್ಲಿ ಸುಮಾರು 820 ಹಿಂದುಳಿದ ಜಾತಿಗಳಿದ್ದು, ಅವುಗಳ ಪೈಕಿ 156 ಜಾತಿಗಳಿಗೆ ಮಾತ್ರ ಮೀಸಲಾತಿ ದೊರಕಿದೆ. ಚಳಿಗಾಲ ಅಧಿವೇಶನದಲ್ಲಿ 2ಎ ಮೀಸಲಾತಿ ಸಿಗದಿದ್ದರೆ ಕೈವಾರದಿಂದ ಪಾದಯಾತ್ರೆ ಕೈಗೊಂಡು ವಿಧಾನಸೌಧ ಚಲೊ ನಡೆಸಲಾಗುವುದು’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.