ಬೆಂಗಳೂರು: ಲಾಕ್‌ಡೌನ್ ನಡುವೆಯೂ, ಹಾಲಿನ ಶೇಖರಣೆ ವಾಹನ, ವಿತರಣಾ ವಾಹನ ಸಂಚರಿಸುತ್ತಿವೆ ಮತ್ತು ಸಿಬ್ಬಂದಿಯೂ ಕಾರ್ಯನಿರ್ವಹಿಸುತ್ತಿದ್ದು, ಹಾಲಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ. ಗ್ರಾಹಕರು ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಹಾಲು ಒಕ್ಕೂಟ (ಬಮೂಲ್) ಹೇಳಿದೆ.
‘ಲಾಕ್‌ಡೌನ್‌ನಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿಯೂ ರೈತರು ಸರಬರಾಜು ಮಾಡುವ ಹಾಲಿನ ಖರೀದಿಯನ್ನು ನಿಲ್ಲಿಸಿಲ್ಲ. ಹಾಲು ಉತ್ಪಾದಕರ ಹಿತ ಕಾಪಾಡಲು ಒಕ್ಕೂಟವು ಬದ್ಧವಾಗಿದೆ’ ಎಂದು ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಸದ್ಯ, ನಿತ್ಯ 14.30 ಲಕ್ಷ ಲೀಟರ್ ಹಾಲು ಶೇಖರಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ 9.5 ಲಕ್ಷ ಲೀಟರ್ ಹಾಲು ಹಾಗೂ 1.6 ಲಕ್ಷ ಲೀಟರ್ ಮೊಸರು ನಿತ್ಯ ಮಾರಾಟ ಮಾಡಲಾಗುತ್ತಿತ್ತು. ಉಳಿದ ಹಾಲನ್ನು ಕನಕಪುರ ಉತ್ಪನ್ನ ಸಂಕೀರ್ಣದಲ್ಲಿ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿತ್ತು. ಆದರೆ, ಲಾಕ್‌ಡೌನ್‌ನಿಂದಾಗಿ ಹಾಲು ಮತ್ತು ಮೊಸರು ಮಾರಾಟ ಪ್ರಮಾಣ ಕಡಿಮೆಯಾಗಿದೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.