ADVERTISEMENT

ರಾಷ್ಟ್ರದಾದ್ಯಂತ ಮದ್ಯ ನಿಷೇಧಕ್ಕೆ ಹೆಗ್ಗಡೆ ಸಲಹೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2019, 2:44 IST
Last Updated 31 ಅಕ್ಟೋಬರ್ 2019, 2:44 IST
ಕಾರ್ಯಕ್ರಮವನ್ನು ವೀರೇದ್ರ ಹೆಗ್ಗಡೆ ಉದ್ಘಾಟಿಸಿದರು. ಶಾಸಕ ಎಸ್.ಆರ್.ವಿಶ್ವನಾಥ್, ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಬ್ಯಾಂಕಿನ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್ ಇದ್ದರು
ಕಾರ್ಯಕ್ರಮವನ್ನು ವೀರೇದ್ರ ಹೆಗ್ಗಡೆ ಉದ್ಘಾಟಿಸಿದರು. ಶಾಸಕ ಎಸ್.ಆರ್.ವಿಶ್ವನಾಥ್, ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಬ್ಯಾಂಕಿನ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್ ಇದ್ದರು   

ಯಲಹಂಕ: ಇಡೀ ರಾಷ್ಟ್ರದಾದ್ಯಂತ ಮದ್ಯನಿಷೇಧ ಮಾಡಿದರೆ ಅದೆಷ್ಟೋ ಕುಟುಂಬಗಳು ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸಿಂಗನಾಯಕನಹಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ 1422ನೇ ಮದ್ಯವರ್ಜನ ಶಿಬಿರದ ಸಮಾರೋಪ ನಮಾರಂಭದಲ್ಲಿ ಮಾತನಾಡಿದ ಅವರು, ‘ಕೇವಲ ಕೆಲವು ರಾಜ್ಯಗಳಲ್ಲಿ ಮದ್ಯನಿಷೇಧ ಮಾಡಿದರೆ, ಪಕ್ಕದ ರಾಜ್ಯಗಳಿಂದ ಅಕ್ರಮವಾಗಿ ಮದ್ಯಸರಬರಾಜು ಮಾಡಿ ಕೊಂಡು ಜನರು ಹಾಳಾಗುತ್ತಾರೆ. ಈ ದಿಸೆಯಲ್ಲಿ ಇಡೀ ದೇಶದಲ್ಲಿ ಮದ್ಯ ನಿಷೇಧವಾಗಬೇಕು’ ಎಂದರು.

ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮದ್ಯವ್ಯಸನಿಗಳಿಗೆ ಮಾನಸಿಕ ಪರಿವರ್ತನಾ ಪಾಠ ಹೇಳುವ ಮೂಲಕ ಕುಡಿತದ ಚಟವನ್ನು ಬಿಡಿಸಲಾಗುತ್ತಿದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ಸಿಂಗನಾಯಕನಹಳ್ಳಿ ರೈತರಸೇವಾ ಸಹಕಾರ ಬ್ಯಾಂಕಿನ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್, ಬಿಜೆಪಿ ಮುಖಂಡ ಡಿ.ಜಯಣ್ಣ, ಗ್ರಾಮ ಪಂಚಾಯಿತಿ ಸದಸ್ಯ ಎಂ.ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.