ADVERTISEMENT

ಬೆಂಗಳೂರು| ಕಟ್ಟಡ ಕುಸಿತ ಪ್ರಕರಣ: ಕಟ್ಟಡದ ಮಾಲೀಕ ಮುನಿರಾಜು ರೆಡ್ಡಿ ವಿರುದ್ಧ FIR

18 ಮಂದಿ ರಕ್ಷಣೆ: ಮುಂದುವರಿದ ಶೋಧ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 4:00 IST
Last Updated 23 ಅಕ್ಟೋಬರ್ 2024, 4:00 IST
<div class="paragraphs"><p>ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ತಂಡದಿಂದ ಮುಂದುವರಿದ ಶೋಧ ಕಾರ್ಯಾಚರಣೆ </p></div>

ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್‌ ತಂಡದಿಂದ ಮುಂದುವರಿದ ಶೋಧ ಕಾರ್ಯಾಚರಣೆ

   

ಬೆಂಗಳೂರು: ಬಾಬು ಸಾ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಕಟ್ಟಡದ ಮಾಲೀಕ, ಆಂಧ್ರಪ್ರದೇಶ ಮೂಲದ ಮುನಿರಾಜು ರೆಡ್ಡಿ ಹಾಗೂ ಇತರರ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಾಲ್ಕು ಅಂತಸ್ತಿನ ಕಟ್ಟಡ‌ ನಿರ್ಮಾಣಕ್ಕೆ ಅನುಮತಿ ಪಡೆದು ಏಳು ಅಂತಸ್ತಿನ ಕಟ್ಟಡ ನಿರ್ಮಿಸಿ ನಿಯಮ‌ ಉಲ್ಲಂಘಿಸಿದ ಹಾಗೂ ಕಳಪೆ ಕಾಮಗಾರಿಗೆ ಕಾರಣರಾದ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ADVERTISEMENT

ಇನ್ನೂ ಮೂವರಿಗೆ ಶೋಧ: ಕಟ್ಟಡ ಕುಸಿದ ಸ್ಥಳದಲ್ಲಿ ರಕ್ಷಣಾ ‌ಕಾರ್ಯಾಚರಣೆ ಮುಂದುವರೆದಿದೆ‌. ಇನ್ನೂ ಮೂವರು ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ. ಗ್ಯಾಸ್ ಕಟ್ಟರ್ ಬಳಸಿ ಬೀಮ್ ಹಾಗೂ ಕಬ್ಬಿಣದ ಸರಳು ತುಂಡರಿಸಿ ಶೋಧ ನಡೆಸಲಾಗುತ್ತಿದೆ ಎಂದು ಪೂರ್ವ ವಿಭಾಗದ ಡಿಸಿಪಿ ದೇವರಾಜು ತಿಳಿಸಿದರು.

ಇದುವರೆಗೂ 18 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಐವರ ಮೃತದೇಹ ಪತ್ತೆಯಾಗಿದೆ.

ನಾರ್ತ್ ಆಸ್ಪತ್ರೆಯಲ್ಲಿ ನಾಲ್ವರು ಹಾಗೂ ಮತ್ತೊಂದು ಆಸ್ಪತ್ರೆಯಲ್ಲಿ ಒಬ್ಬ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.