ADVERTISEMENT

ಬೆಂಗಳೂರು ನಗರ DCಯಾಗಿ ಜಿ. ಜಗದೀಶ್‌

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 16:15 IST
Last Updated 8 ಅಕ್ಟೋಬರ್ 2024, 16:15 IST
ಜಿ. ಜಗದೀಶ್
ಜಿ. ಜಗದೀಶ್   

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಜಿ. ಜಗದೀಶ್‌ ಅವರನ್ನು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರನ್ನು ನೋಂದಣಿ ಮಹಾಪರಿವೀಕ್ಷಕ ಮತ್ತು ಮುದ್ರಾಂಕಗಳ ಆಯುಕ್ತರಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಶನಿವಾರ ಆದೇಶ ಹೊರಡಿಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತ ಕೆ. ಶ್ರೀನಿವಾಸ್‌ ಅವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ. 

ADVERTISEMENT

ಜಿಲ್ಲಾಧಿಕಾರಿಯಾಗಿದ್ದ ದಯಾನಂದ ಅವರು ನೋಂದಣಿ ಮಹಾಪರಿವೀಕ್ಷಕ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ಹೊಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.