ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯವು 2024-25ನೇ ಶೈಕ್ಷಣಿಕ ಸಾಲಿಗೆ ಸ್ನಾತಕೋತ್ತರ ವಿಭಾಗಗಳು ಮತ್ತು ಸಂಯೋಜಿತ ಕಾಲೇಜುಗಳ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿ ಪ್ರಕ್ರಿಯೆಗೆ ಇದೇ 21ರಿಂದ 25ರವರೆಗೆ ಕೌನ್ಸೆಲಿಂಗ್ ಹಮ್ಮಿಕೊಂಡಿದೆ.
ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದ ಆವರಣದಲ್ಲಿ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ. ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್ಸೈಟ್ http://bcu.ac.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.