ಬೆಂಗಳೂರು: ನಗರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯು ಕೇರಳದಲ್ಲಿ ನಿಫಾ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಸಂಪರ್ಕಿತರಲ್ಲಿ 41 ಮಂದಿಯನ್ನು ಇಲ್ಲಿ ನಿಗಾ ವ್ಯವಸ್ಥೆಗೆ ಒಳಪಡಿಸಲಾಗಿದ್ದು, ಅವರಲ್ಲಿ ಒಬ್ಬರಿಗೆ ಈ ಸೋಂಕಿನ ಲಕ್ಷಣ ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಈವರೆಗೆ ಯಾವುದೇ ನಿಫಾ ಪ್ರಕರಣ ವರದಿಯಾಗಿಲ್ಲ. ಒಬ್ಬರನ್ನು ಹೊರತುಪಡಿಸಿದರೆ ಉಳಿದ ಎಲ್ಲ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರಲ್ಲಿ ರೋಗದ ಯಾವುದೇ ಲಕ್ಷಣವಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರ ವಹಿಸಬೇಕು. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಬೇಕು. ನಿಫಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯ ಇದೆ ಎಂದು ಹೇಳಿದೆ.
ಕೇರಳದಿಂದ ಇಲ್ಲಿಗೆ ಬರುವವರು ಜ್ವರ, ಅಸ್ವಸ್ಥತೆ, ತಲೆನೋವು, ಉಸಿರಾಟದ ಸಮಸ್ಯೆ, ಕೆಮ್ಮು ಸೇರಿದಂತೆ ವಿವಿಧ ಲಕ್ಷಣಗಳನ್ನು ಹೊಂದಿದ್ದಾರೆಯೇ ಎನ್ನುವುದನ್ನು ಪರಿಶೀಲಿಸಿ, ಶಂಕಿತರನ್ನು ಗುರುತಿಸಲಾಗುತ್ತಿದೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.