ADVERTISEMENT

ಬೆಂಗಳೂರು | ಆರು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 3:17 IST
Last Updated 23 ಅಕ್ಟೋಬರ್ 2024, 3:17 IST
<div class="paragraphs"><p>ಘಟನಾ ಸ್ಥಳದಲ್ಲಿ&nbsp;ಎನ್‌ಡಿಆರ್‌ಎಫ್ ಸಿಬ್ಬಂದಿ&nbsp;ರಾತ್ರಿ ‌ಇಡೀ ಕಾರ್ಯಾಚರಣೆ ನಡೆಸಿದರು.</p></div>

ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿ ರಾತ್ರಿ ‌ಇಡೀ ಕಾರ್ಯಾಚರಣೆ ನಡೆಸಿದರು.

   

ಬೆಂಗಳೂರು: ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ‌ಬಾಬು ಸಾ ಪಾಳ್ಯದಲ್ಲಿ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದ್ದು ಇದುವರೆಗೂ ಐದು ಕಾರ್ಮಿಕರ ಮೃತದೇಹ ಹೊರಕ್ಕೆ ತೆಗೆಯಲಾಗಿದೆ.

ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ ಸಿಬ್ಬಂದಿ ರಾತ್ರಿ ‌ಇಡೀ ಕಾರ್ಯಾಚರಣೆ ನಡೆಸಿದರು. ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದ ಅರ್ಮಾನ್, ಮೊಹ್ಮದ್ ಸಾಹಿಲ್, ತಿರುಪಾಲಿ ಸೇರಿದಂತೆ ಐವರ ಮೃತದೇಹ ಪತ್ತೆಯಾಗಿದ್ದು ಹೊರಕ್ಕೆ ತೆಗೆಯಲಾಗಿದೆ.

ADVERTISEMENT

ಬದುಕಿ ಬಂದ ಅಯಾನ್: ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ದ ಅಯಾನ್ ಅವರನ್ನು 13 ಗಂಟೆಗಳ ನಿರಂತರ‌ ಕಾರ್ಯಾಚರಣೆ‌ ಬಳಿಕ ರಕ್ಷಣೆ ಮಾಡಲಾಗಿದೆ. ಸ್ಥಳದಲ್ಲಿ ಆಂಬುಲೆನ್ಸ್‌ನಲ್ಲಿ ಅವರನ್ನು ಆಸ್ಪತ್ರೆ‌ ಕರೆದೊಯ್ಯಲಾಗಿದೆ. ನಾಪತ್ತೆಯಾದ ಇಬ್ಬರಿಗಾಗಿ ಶೋಧ ಕಾರ್ಯಾಚರಣೆ‌ ಮುಂದುವರೆದಿದೆ.

ಪೂರ್ವ ವಿಭಾಗದ ಡಿಸಿಪಿ‌ ದೇವರಾಜು ಅವರ ಉಸ್ತುವಾರಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.