ADVERTISEMENT

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: 801 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 15:40 IST
Last Updated 25 ಜೂನ್ 2024, 15:40 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಬೆಂಗಳೂರು: ಪಶ್ಚಿಮ ವಿಭಾಗದ ಹಲವು ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ್ದ ಆರೋಪದ ಅಡಿ 801 ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

‘ಏಕಮುಖ ಸಂಚಾರಕ್ಕೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ, ನಿಗದಿತವಲ್ಲದ ಸ್ಥಳಗಳಲ್ಲಿ ವಾಹನ ನಿಲುಗಡೆ ಮಾಡುತ್ತಿದ್ದ ಚಾಲಕರ ವಿರುದ್ಧ ಮಂಗಳವಾರ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲು ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

‘ಏಕಮುಖ ಸಂಚಾರಕ್ಕೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ವಿರುದ್ಧ 332 ಪ್ರಕರಣಗಳು, ತಪ್ಪು ನಿಲುಗಡೆ ಮಾಡುವವರ ವಿರುದ್ಧ 128, ಪಾದಚಾರಿ ಮಾರ್ಗದಲ್ಲಿ 16 ಹಾಗೂ ಅಜಾಗರೂಕತೆ ಚಾಲನೆ ಮಾಡುವವರ ವಿರುದ್ಧ 7 ಹಾಗೂ ವ್ಹೀಲೆ ನಡೆಸುವವರ ವಿರುದ್ಧ 21 ಹಾಗೂ ಇತರೆ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿದ್ದ ಚಾಲಕರ ವಿರುದ್ಧ 269 ಪ್ರಕರಣ ದಾಖಲು ಮಾಡಲಾಗಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.