ಬೆಂಗಳೂರು: ಒಂದೇ ಕ್ಷೇತ್ರದಿಂದ ಸತತವಾಗಿ ಎಂಟನೇ ಬಾರಿಗೆ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೆಸರು ಲಿಮ್ಕಾ ವಿಶ್ವ ದಾಖಲೆ ಪುಸ್ತಕಕ್ಕೆ ಸೇರಿದೆ.
ಭಾರತದ ರಾಜಕೀಯಕ್ಕೆ ಸಂಬಂಧಿಸಿದಂತೆ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆಯು ಪ್ರಕಟಿಸಿರುವ ಪುಸ್ತಕದಲ್ಲಿ ದೀರ್ಘಾವಧಿಗೆ ಚುನಾಯಿತ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಿರುವ ಮೂವರು ರಾಜಕಾರಣಿಗಳ ಹೆಸರುಗಳನ್ನು ಪ್ರಕಟಿಸಲಾಗಿದೆ.
ಹೊರಟ್ಟಿ ಅವರು 1980ರಿಂದ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಬುಧವಾರದವರೆಗೆ 43 ವರ್ಷ 201 ದಿನಗಳ ಕಾಲ ಒಂದೇ ಕ್ಷೇತ್ರದ ಪ್ರತಿನಿಧಿಯಾಗಿದ್ದಾರೆ. ಈ ದಾಖಲೆ ನಿರ್ಮಿಸಿರುವುದಕ್ಕಾಗಿ ಅವರ ಹೆಸರನ್ನು ಲಿಮ್ಕಾ ದಾಖಲೆ ಪುಸ್ತಕದಲ್ಲಿ ಸೇರಿಸಲಾಗಿದೆ.
24 ವರ್ಷ 165 ದಿನಗಳ ಕಾಲ ಸಿಕ್ಕಿಂ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಪವನ್ ಕುಮಾರ್ ಮತ್ತು 23 ವರ್ಷ 137 ದಿನಗಳ ಕಾಲ ಪಶ್ಚಿಮ ಬಂಗಾಳ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಜ್ಯೋತಿ ಬಸು ಅವರ ಹೆಸರುಗಳೂ ಈ ಬಾರಿಯ ಲಿಮ್ಕಾ ದಾಖಲೆ ಪುಸ್ತಕದಲ್ಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.