ಬೆಂಗಳೂರು: ಬಿಬಿಎಂಪಿ ಸಿದ್ಧಪಡಿಸಿರುವ ‘ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಬೈಲಾ -2018’ ಕರಡಿಗೆ ಸಂಬಂಧಿಸಿ ಒಟ್ಟು 737 ಅರ್ಜಿಗಳು ಸಲ್ಲಿಕೆ ಆಗಿವೆ.
ಬೈಲಾ ಕರಡನ್ನು ಪಾಲಿಕೆಯ ವೆಬ್‌ಸೈಟ್‌ನಲ್ಲಿ (http://bbmp.gov.in) ಸೆಪ್ಟೆಂಬರ್ 29ರಂದು ಪ್ರಕಟಿಸಲಾಗಿತ್ತು. ಇದಕ್ಕೆ ಆಕ್ಷೇಪಣೆ ಹಾಗೂ ಸಲಹೆ ಸೂಚನೆಗಳನ್ನು ನೀಡುವುದಕ್ಕೆ ಗುರುವಾರ ಕೊನೆಯ ದಿನವಾಗಿತ್ತು.
‘ಅರ್ಜಿಗಳನ್ನು ಇನ್ನು 10 ದಿನಗಳ ಒಳಗೆ ಅಧ್ಯಯನ ನಡೆಸುತ್ತೇವೆ. ಬಂದಿರುವ ಸಲಹೆ ಹಾಗೂ ಆಕ್ಷೇಪಣೆಗಳಲ್ಲಿ ಪ್ರಮುಖವಾದ ಅಂಶಗಳನ್ನು ಬೈಲಾದಲ್ಲಿ ಅಳವಡಿಸಿಕೊಳ್ಳುತ್ತೇವೆ’ ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.
‘ತಿದ್ದುಪಡಿಗಳನ್ನು ಅಳವಡಿಸಿಕೊಂಡ ಬಳಿಕ ಬೈಲಾವನ್ನು ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಲಿದ್ದೇವೆ. ಇಲಾಖೆಯ ಅನುಮೋದನೆ ಸಿಕ್ಕ ಬಳಿಕ ಅದನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.