ADVERTISEMENT

ವಾರ್ಡ್‌ಗಳ ಪುನರ್‌ ವಿಂಗಡಣೆ ವರದಿ: ಸಮಯಾವಕಾಶ ಕೋರಿದ ಬಿಬಿಎಂಪಿ

​ಪ್ರಜಾವಾಣಿ ವಾರ್ತೆ
Published 31 ಮೇ 2022, 19:29 IST
Last Updated 31 ಮೇ 2022, 19:29 IST
   

ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ಪುನರ್‌ ವಿಂಗಡಣೆ ವರದಿ ಸಲ್ಲಿಸಲು ಇನ್ನೆರಡು ದಿನಗಳ ಕಾಲಾವಕಾಶ ನೀಡುವಂತೆ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯನ್ನು ಕೋರಿದೆ.

ಪುನರ್‌ ವಿಂಗಡಣೆಯ ಕರಡು ಪ್ರತಿ ಸಿದ್ಧವಾಗಿದೆ. ಆದರೆ, ಮುಖ್ಯಮಂತ್ರಿ ಅವರ ಗಮನಕ್ಕೆ ತಂದ ಬಳಿಕವೇ ವರದಿ ಸಲ್ಲಿಸಲು ಬಿಬಿಎಂಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಪುನರ್‌ ವಿಂಗಡಣೆ ವರದಿಯನ್ನು ತಕ್ಷಣವೇ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮೇ22ರಂದು ಸೂಚಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.