ADVERTISEMENT

ಚುನಾವಣೆ ಮತ್ತೆ ಮುಂದಕ್ಕೆ?

ಬಿಬಿಎಂಪಿ ಸ್ಥಾಯಿಸಮಿತಿ: ಅಂತಿಮಗೊಳ್ಳದ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2019, 23:24 IST
Last Updated 29 ಡಿಸೆಂಬರ್ 2019, 23:24 IST
   

ಬೆಂಗಳೂರು: ಬಿಬಿಎಂಪಿಯ 12 ಸ್ಥಾಯಿಸಮಿತಿಗಳಿಗೆ ಸೋಮವಾರ ನಿಗದಿಯಾಗಿದ್ದ ಚುನಾವಣೆ ಮತ್ತೆ ಮುಂದೂಡಿಕೆಯಾಗುವ ಸಾಧ್ಯತೆ ನಿಚ್ಚಳವಾಗಿದೆ.

ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ಕಣಕ್ಕಿಳಿಸಬೇಕು, ಯಾರಿಗೆ ಸದಸ್ಯ ಸ್ಥಾನ ನೀಡಬೇಕು ಎಂಬ ಬಗ್ಗೆ ಚರ್ಚಿಸಲು ಬಿಜೆಪಿ ಕಚೇರಿಯಲ್ಲಿ ಭಾನುವಾರ ಸಂಜೆ ಸಭೆ ನಿಗದಿಪಡಿಸಲಾಗಿತ್ತು.

ಆದರೆ, ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ನಿಧನದಿಂದಾಗಿ ಈ ಸಭೆಯನ್ನು ಕೊನೆ ಕ್ಷಣದಲ್ಲಿ ರದ್ದುಪಡಿಸಲಾಯಿತು.

ADVERTISEMENT

‘ಪೇಜಾವರಶ್ರೀ ನಿಧನದ ಶೋಕಾ ಚರಣೆ ಮೂರು ದಿನಗಳ ಕಾಲ ಇರಲಿದೆ. ಹಾಗಾಗಿ, ಚುನಾವಣೆ ನಡೆಸುವುದು ಸೂಕ್ತವಲ್ಲ. ನಮ್ಮ ಪಕ್ಷದ ಸದಸ್ಯರು ಸೋಮವಾರ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವು
ದಿಲ್ಲ. ಅಲ್ಲದೇ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಆಯ್ಕೆಯೂ ಅಂತಿಮಗೊಂಡಿಲ್ಲ. ಹಾಗಾಗಿ, ಸಭೆ ಮತ್ತೆ ಮುಂದಕ್ಕೆ ಹೋಗಲಿದೆ’ ಎಂದು ಹೆಸರು ಬಹಿರಂಗ ಪಡಿಸಲು ಬಯಸದ ಬಿಜೆಪಿ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಾಗೂ ವಿಪ್‌ ಉಲ್ಲಂಘನೆ ಮಾಡಿದ ಸದಸ್ಯರನ್ನು ಅನರ್ಹಗೊಳಿಸುವವರೆಗೂ ಚುನಾವಣೆ ನಡೆಸದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಬಿಬಿಎಂಪಿ ಆಯುಕ್ತರನ್ನು ಒತ್ತಾಯಿಸಿದ್ದವು.

ಈ ಪಕ್ಷಗಳ ಸದಸ್ಯರೂ ಚುನಾವಣೆ ಯಲ್ಲಿ ಭಾಗವಹಿಸುವ ಸಾಧ್ಯತೆಯೂ ಕಡಿಮೆ.

ಡಿಸೆಂಬರ್ 4ರಂದು ನಿಗದಿಯಾಗಿದ್ದ ಸ್ಥಾಯಿ ಸಮಿತಿ ಚುನಾವಣೆ ಪ್ರಕ್ರಿಯೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳ ಪಾಲಿಕೆ ಸದಸ್ಯರು ಭಾಗವಹಿಸಿರಲಿಲ್ಲ.

ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.