ಬೆಂಗಳೂರು: ‘ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆಗೆ ಸಂಬಂಧಿಸಿದ ಕರಡು ಸಿದ್ಧಪಡಿಸುತ್ತಿದ್ದೇವೆ. ಈ ಕುರಿತು ಕೆಲವು ಗೊಂದಲಗಳಿದ್ದು, ಅವುಗಳನ್ನು ಬಗೆಹರಿಸುವಂತೆ ಸರ್ಕಾರವನ್ನು ಕೋರಿದ್ದೇವೆ. ಸರ್ಕಾರದ ನಿರ್ದೇಶನ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.
ಸುದ್ದಿಗಾರರ ಪ್ರಶ್ನೆಗೆ ಸೋಮವಾರ ಉತ್ತರಿಸಿದ ಅವರು, ‘ವಾರ್ಡ್ ಮರುವಿಂಗಡಣೆ ಬಗ್ಗೆ ನಾವು ವರದಿ ನೀಡಿದ ಬಳಿಕ ಸರ್ಕಾರ ಅಧಿಸೂಚನೆ ಹೊರಡಿಸಲಿದೆ. ಬಳಿಕ ರಾಜ್ಯ ಚುನಾವಣಾ ಆಯೋಗಕ್ಕೆ ಸರ್ಕಾರ ಮಾಹಿತಿ ನೀಡಲಿದೆ. ಬಳಿಕ ಆಯೋಗದ ನಿರ್ದೇಶನದ ಪ್ರಕಾರ ಚುನಾವಣೆ ನಡೆಯಲಿದೆ’ ಎಂದರು.
‘ಶಿಥಿಲಗೊಂಡ ಕಟ್ಟಡಗಳ ಪಟ್ಟಿಯಲ್ಲಿ ಗುರುತಿಸಿರುವ ಎಲ್ಲ ಕಟ್ಟಡಗಳನ್ನು ಕೆಡವಲೇ ಬೇಕೆಂದಿಲ್ಲ. ಆ ಕಟ್ಟಡಗಳಲ್ಲಿ ವಾಸ್ತವ್ಯ ಇರುವವರಿಗೆ ತಮ್ಮ ಅಹವಾಲು ಹೇಳಿಕೊಳ್ಳಲು ಅವಕಾಶ ನೀಡುತ್ತೇವೆ. ಅನಿವಾರ್ಯ ಇದ್ದರೆ ಅಥವಾ ಕಟ್ಟಡ ತೀರಾ ಅಪಾಯಕಾರಿಯಾಗಿದ್ದರೆ ಮಾತ್ರ ಅಂತಹವುಗಳನ್ನು ಕೆಡವಲು ಕ್ರಮ ಕೈಗೊಳ್ಳುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.