ಬೆಂಗಳೂರು: ಬಿಬಿಎಂಪಿ ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ.
ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸುಗಳನ್ನು ಸರ್ಕಾರವು ಒಪ್ಪಿರುತ್ತದೆ ಹಾಗೂ ಬಿಬಿಎಂಪಿ ಅಧಿನಿಯಮ– 2020ರ ಕಲಂ 7ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ, 2011ರ ಜನಗಣತಿಯ ಆಧಾರದ ಮೇರೆಗೆ ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಅಂತಿಮಗೊಳಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಾರ್ಡ್‌ಗಳ ಸಂಖ್ಯೆ 225 ಆಗಿದ್ದು, ವಾರ್ಡ್‌ಗಳ ಹೆಸರು ಮತ್ತು ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.