ADVERTISEMENT

ಬಿಡಿಎ ಕಾರ್ಯಾಚರಣೆ: ಅನಧಿಕೃತ ಶೆಡ್‌ ತೆರವು

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 15:44 IST
Last Updated 4 ಜುಲೈ 2024, 15:44 IST
ಡಾಲರ್ಸ್‌ ಲೇಔಟ್‌ನಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಶೆಡ್‌ ಅನ್ನು ಬಿಡಿಎ ಸಿಬ್ಬಂದಿ ಗುರುವಾರ ತೆರವುಗೊಳಿಸಿದರು.
ಡಾಲರ್ಸ್‌ ಲೇಔಟ್‌ನಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಶೆಡ್‌ ಅನ್ನು ಬಿಡಿಎ ಸಿಬ್ಬಂದಿ ಗುರುವಾರ ತೆರವುಗೊಳಿಸಿದರು.   

ಬೆಂಗಳೂರು: ಬಿಟಿಎಂ ಲೇಔಟ್‌ ಎರಡನೇ ಹಂತದ ಡಾಲರ್ಸ್‌ ಲೇಔಟ್‌ನಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಶೆಡ್‌ ಅನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸಿಬ್ಬಂದಿ ಗುರುವಾರ ತೆರವುಗೊಳಿಸಿದರು.

ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿ, ಬಿಳೇಕಹಳ್ಳಿ ಗ್ರಾಮದ ಸರ್ವೆ ನಂ. 56/1 ಮತ್ತು 172/3ರಲ್ಲಿ 4,435 ಚದರ ಅಡಿಯ ನಿವೇಶನ ಸಂಖ್ಯೆ 132ರಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಶೆಡ್ ಮತ್ತು ಕಾಂಪೌಂಡ್ ಅನ್ನು ತೆರವುಗೊಳಿಸಲಾಯಿತು. ಈ ನಿವೇಶನದ ಮೌಲ್ಯ ಸುಮಾರು ₹8 ಕೋಟಿ ಎಂದು ಬಿಡಿಎ ಪ್ರಕಟಣೆ ತಿಳಿಸಿದೆ.

ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಬಿಡಿಎ ಎಸ್‌ಪಿ, ಇನ್‌ಸ್ಪೆಕ್ಟರ್ ಹಾಗೂ ದಕ್ಷಿಣ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಹಾಗೂ ಸ್ಥಳೀಯ ಪೊಲೀಸರು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.