ಬೆಂಗಳೂರು: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುವ ಸಾಧ್ಯತೆ ಇರುವುದರಿಂದ ಆಯ್ದ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಹಾಗೂ ಹಾಸಿಗೆಗಳನ್ನು ಕಾಯ್ದಿರಿಸಬೇಕು ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸೂಚಿಸಿದ್ದಾರೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಅವರು, ಸಚಿವ ಸಂಪುಟ ಉಪಸಮಿತಿಯ ಸಭೆಯ ನಿರ್ದೇಶನದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಎಚ್ ಬ್ಲಾಕ್, ಕೆ.ಸಿ. ಜನರಲ್ ಆಸ್ಪತ್ರೆ, ಜಯನಗರ ಸಾರ್ವಜನಿಕ ಆಸ್ಪತ್ರೆ, ಸಿ.ವಿ. ರಾಮನ್ ಆಸ್ಪತ್ರೆ ಹಾಗೂ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ಕಾಯ್ದಿರಿಸಬೇಕು ಎಂದು ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಆಯುಕ್ತರಿಗೆ ತಿಳಿಸಿದ್ದಾರೆ.
ರಾಜ್ಯದ ವೈದ್ಯಕೀಯ ಕಾಲೇಜುಗಳು ಸೇರಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಕನಿಷ್ಠ 10 ಸಾಮಾನ್ಯ ಹಾಸಿಗೆಗಳು ಹಾಗೂ 5 ತೀವ್ರ ನಿಗಾ ಘಟಕ (ಐಸಿಯು) ಹಾಸಿಗೆಗಳನ್ನು ಪ್ರತ್ಯೇಕವಾಗಿ ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.