ADVERTISEMENT

ಬಿಇಎಂಎಲ್‌: ಗ್ರೂಪ್‌ ಸಿ ಹುದ್ದೆ ನೇಮಕಾತಿ ಅಧಿಸೂಚನೆಗೆ ತಡೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2024, 20:32 IST
Last Updated 27 ಜೂನ್ 2024, 20:32 IST
<div class="paragraphs"><p>ಬಿಇಎಂಎಲ್‌</p></div>

ಬಿಇಎಂಎಲ್‌

   

ಬೆಂಗಳೂರು: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಕಂಪನಿಯು ಗ್ರೂಪ್‌-ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಅಮಾನತ್ತಿನಲ್ಲಿ ಇರಿಸುವಂತೆ ಹೈಕೋರ್ಟ್‌ ಆದೇಶಿಸಿದೆ. ಇದರಿಂದಾಗಿ, ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ತಡೆ ನೀಡಿದಂತಾಗಿದೆ.

ಬಿಇಎಂಎಲ್ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಹಾಗೂ ‘ನಮ್ಮ ಸೇವೆಯನ್ನೇ ಕಾಯಂಗೊಳಿಸಲು ಆದೇಶಿಸಬೇಕು’ ಎಂದು ಕೋರಿ ಗುತ್ತಿಗೆ ಕಾರ್ಮಿಕರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಿದೆ.

ADVERTISEMENT

ಇಂದಿನಿಂದ ಒಂದು ತಿಂಗಳ ಕಾಲ ಬಿಇಎಂಎಲ್ 2023 ರ ಸೆಪ್ಟೆಂಬರ್ 27 ರಂದು ಹೊರಡಿಸಿದ ಅಧಿಸೂಚನೆಯನ್ನು ಅಮಾನತ್ತಿನಲ್ಲಿ ಇರಿಸುವುದಾಗಿ ಆದೇಶಿಸಿರುವ ನ್ಯಾಯಪೀಠ, ‘ಗುತ್ತಿಗೆ ಕಾರ್ಮಿಕರ ಸ್ಥಿತಿಗತಿಯನ್ನು ಪರಿಶೀಲಿಸಿ ನಿಯಮಾನುಸಾರ ಅವರ ಅರ್ಹತೆಯನ್ನು ನಿರ್ಣಯಿಸುವುದು ಮತ್ತು ನೇಮಕಾತಿ ಪ್ರಕ್ರಿಯೆಯನ್ನು ನ್ಯಾಯೋಚಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸುವುದು ಮುಖ್ಯ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.