ADVERTISEMENT

ದ.ರಾ.ಬೇಂದ್ರೆ ಸ್ಮೃತಿ ಲೇಖನ ಸ್ಪರ್ಧೆ; ಶೈಲಜ ಹೆಗ್ಡೆಗೆ ಮೊದಲ ಬಹುಮಾನ

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 16:16 IST
Last Updated 17 ಜನವರಿ 2022, 16:16 IST

ಬೆಂಗಳೂರು:ದ.ರಾ.ಬೇಂದ್ರೆ ಕಾವ್ಯ ಕೂಟವು ಪಿಎಚ್‌.ಡಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ‘ದ.ರಾ.ಬೇಂದ್ರೆ ಸ್ಮೃತಿ ಲೇಖನ ಸ್ಪರ್ಧೆ–14’ರಲ್ಲಿ ಮುಂಬೈ ವಿಶ್ವವಿದ್ಯಾಲಯದ ಸಂಶೋಧಕಿ ಶೈಲಜ ಹೆಗ್ಡೆ ಮೊದಲ ಬಹುಮಾನ ಪಡೆದಿದ್ದಾರೆ.

‘ಅವರಿಗೆ ₹5 ಸಾವಿರ ಬಹುಮಾನನೀಡಲಾಗುತ್ತದೆ’ ಎಂದು ಪ್ರಕಟಣೆ ತಿಳಿಸಿದೆ.

‘ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಂಶೋಧಕಿ ಕೆ.ವಿ.ಅನಿತಾ ಎರಡನೇ ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಂಶೋಧಕಿ ಆಶಾ ಚೌಗಲೆ ಮೂರನೇ ಬಹುಮಾನ ಗಳಿಸಿದ್ದಾರೆ. ಅವರಿಗೆ ಕ್ರಮವಾಗಿ ₹4,000 ಹಾಗೂ ₹3,000 ಬಹುಮಾನ ನೀಡಲಾಗುತ್ತದೆ’ ಎಂದು ಹೇಳಿದೆ.

ADVERTISEMENT

‘ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಸಂಶೋಧಕ ಕುಮಾರ ಯಲಿಬಳ್ಳಿ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧಕಿ ಎನ್‌.ರೇಖಾ ಅವರಿಗೆ ಪ್ರೋತ್ಸಾಹಕ ಬಹುಮಾನ ಕೊಡಲಾಗಿದೆ. ಇವರಿಗೆ ತಲಾ ₹2,000 ಸಿಗಲಿದೆ’ ಎಂದು ವಿವರಿಸಲಾಗಿದೆ.

‘ದ.ರಾ.ಬೇಂದ್ರೆ ಅವರ ಜನ್ಮದಿನದಂದು (ಜ.31) ಬಹುಮಾನ ಪ್ರದಾನ ಸಮಾರಂಭವನ್ನು ಆನ್‌ಲೈನ್‌ನಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ದ.ರಾ.ಬೇಂದ್ರೆ ಕಾವ್ಯ ಕೂಟದ ಅಧ್ಯಕ್ಷ ಜಿ.ಕೃಷ್ಣಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.