ಬೆಂಗಳೂರು: ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ಅವಧಿಯಲ್ಲಿ ಜಾರಿಯಾದ ವಿವಿಧ ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪಿಸುವ ಉದ್ದೇಶದಿಂದ ಮಾರ್ಚ್ 4ರಿಂದ 20ರವರೆಗೆ ಎಲ್ಲ ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
ಸಚಿವರಾದ ಎಸ್.ಟಿ. ಸೋಮಶೇಖರ್, ಕೆ. ಗೋಪಾಲಯ್ಯ ಮತ್ತು ಆನಂದ್ ಸಿಂಗ್ ಅವರೊಂದಿಗೆ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, '31 ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಸ್ಥಳೀಯವಾಗಿ ಸಮಾವೇಶಗಳ ನೇತೃತ್ವ ವಹಿಸಲಿದ್ದಾರೆ' ಎಂದರು.
ಪ್ರತಿಯೊಬ್ಬ ಫಲಾನುಭವಿಯನ್ನೂ ಸಂಪರ್ಕಿಸಿ ಯೋಜನೆಗಳ ಕುರಿತು ಮಾಹಿತಿ ನೀಡುವುದು ಸರ್ಕಾರದ ಉದ್ದೇಶ. ಅದಕ್ಕಾಗಿ ಸಮಾವೇಶಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ ಎಂದು ಹೇಳಿದರು.
ಸರ್ಕಾರಿ ನೌಕರರ ಮುಷ್ಕರ ಕುರಿತು ಪ್ರತಿಕ್ರಿಯಿಸಿದ ಸೋಮಶೇಖರ್, 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರಿ ನೌಕರರ ಸಂಘದ ಪ್ರಮುಖರ ಜತೆ ಚರ್ಚಿಸಿ, ಸಮಸ್ಯೆ ಪರಿಹರಿಸಲಿದ್ದಾರೆ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.