ADVERTISEMENT

ಬೆಂಗಳೂರು: ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 1:52 IST
Last Updated 20 ಅಕ್ಟೋಬರ್ 2024, 1:52 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಉಪ ಲೋಕಾಯುಕ್ತ ಕೆ.ಎನ್‌.ಫಣೀಂದ್ರ ಅವರು ಇದೇ 24ರಿಂದ ಎರಡು ದಿನ ನಗರದಲ್ಲಿ ಪ್ರವಾಸ ನಡೆಸಲಿದ್ದಾರೆ. ಯಲಹಂಕ ಉಪನಗರದ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

24ರಂದು ಬೆಳಿಗ್ಗೆ 10ರಿಂದ ಯಲಹಂಕ ಮತ್ತು ಪೂರ್ವ ತಾಲ್ಲೂಕುಗಳಿಗೆ ಸಂಬಂಧಿಸಿದ ಅಹವಾಲು ಸ್ವೀಕರಿಸುವರು. ಸಂಜೆ 5.30ರಿಂದ ‘ಕರ್ನಾಟಕ ಲೋಕಾಯುಕ್ತ ಕಾಯ್ದೆ’ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ADVERTISEMENT

ಅಹವಾಲುಗಳ ಪರಿಶೀಲನೆ, ಪರಿಹಾರ ಸಂಬಂಧ 25ರಂದು ಜಿಲ್ಲಾಧಿಕಾರಿ, ವಿವಿಧ ಇಲಾಖೆಯ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲು ಸಲ್ಲಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.