ADVERTISEMENT

Bengaluru Bandh | ಬೆಂಗಳೂರಿನ ಹೋಟೆಲ್‌ಗೆ ನುಗ್ಗಿ ಗಲಾಟೆ: ಪ್ರಕರಣ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಸೆಪ್ಟೆಂಬರ್ 2023, 13:09 IST
Last Updated 26 ಸೆಪ್ಟೆಂಬರ್ 2023, 13:09 IST
<div class="paragraphs"><p><strong>ಬೆಂಗಳೂರಿನ ಹೋಟೆಲ್‌ಗೆ ನುಗ್ಗಿ ಗಲಾಟೆ</strong></p></div>

ಬೆಂಗಳೂರಿನ ಹೋಟೆಲ್‌ಗೆ ನುಗ್ಗಿ ಗಲಾಟೆ

   

‘ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬಾರದು’ ಎಂದು ಆಗ್ರಹಿಸಿ ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ.

ಬೆಂಗಳೂರು ಬಂದ್‌ಗೆ ಬಿಜೆಪಿ, ಜೆಡಿಎಸ್‌ ಬೆಂಬಲ

ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್‌ ಜತೆ, 50ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ADVERTISEMENT

ಕರವೇ ಪ್ರತ್ಯೇಕ ಪ್ರತಿಭಟನೆ

ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣಗೌಡ ಬಣದಿಂದ ಇಂದು ಬೆಳಿಗ್ಗೆ ಪ್ರತ್ಯೇಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಗಾಂಧಿನಗರದಲ್ಲಿ ಇರುವ ಸಂಘಟನೆಯ ಕಚೇರಿಯಿಂದ ವಿಧಾನ ಸೌಧದವರೆಗೆ ಮೆರವಣಿಗೆ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕರವೇ ತಿಳಿಸಿದೆ.

‘ಕಾವೇರಿ ನದಿ ವಿಚಾರವಾಗಿ ನಮ್ಮ ಹೋರಾಟ ನಿರಂತರ. ಜನರಲ್ಲಿ ಜಾಗೃತಿ ಮೂಡಿಸುವುದು ಮೊದಲ ಆದ್ಯತೆ. ಬಂದ್ ಮಾಡಿ ಜನಸಾಮಾನ್ಯರಿಗೆ ತೊಂದರೆ ನೀಡುವ ಉದ್ದೇಶ ನಮಗಿಲ್ಲ. ಬಂದ್ ಎಂಬುದು ಹೋರಾಟದ ಕೊನೆಯ ಅಸ್ತ್ರ. ಹೀಗಾಗಿ, ಯಾವುದೇ ಬಂದ್‌ಗೆ ನಮ್ಮ ಬೆಂಬಲವಿಲ್ಲ’ ಎಂದು ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.

ಬಿಎಂಟಿಸಿ ಬಸ್, ಮೆಟ್ರೊ ರೈಲು ಎಂದಿನಂತೆ 

ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಮತ್ತು ಮೆಟ್ರೊ ರೈಲು ಸಂಚಾರ ಎಂದಿನಂತೆ ಇದೆ.

ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬಳಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಬಸ್ ಸಂಚಾರ ಎಂದಿನಂತೆ

ಬೆಂಗಳೂರು ನಗರದಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಮತ್ತು ಮೆಟ್ರೊ ರೈಲು ಸಂಚಾರ ಎಂದಿನಂತೆ ಇದೆ.

ಸ್ಯಾಟ್‌ಲೈಟ್ ಬಸ್ ನಿಲ್ದಾಣದಲ್ಲಿ ಎಂದಿನಂತೆ ಬಸ್ ಸಂಚಾರ

Cauvery Water Dispute: ಮಳವಳ್ಳಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಕಾವೇರಿಗಾಗಿ ರಾಮನಗರ ಬಂದ್: ಸ್ಟಾಲಿನ್‌ ಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ

Bengaluru Bandh: ಪ್ರತಿಭಟನೆ ಮೆರವಣಿಗೆ ಮಾಡದಂತೆ ಪೊಲೀಸರ ತಡೆ

Bengaluru Bandh | ಬೆಂಗಳೂರಿನಲ್ಲಿ ಪೊಲೀಸರ ಬಿಗಿ ಭದ್ರತೆ, ರಸ್ತೆಗೆ ಬಾರದ ಜನ

Photos | ಕಾವೇರಿಗೆ ಬೆಂಬಲ; ಬಂದ್‌ಗೆ ಬಿಕೋ ಎನ್ನುತ್ತಿರುವ ಬೆಂಗಳೂರಿನ ಚಿತ್ರಣ

ರೈತರ ಕಾವೇರಿ ಹೋರಾಟಕ್ಕೆ ಸುದೀಪ್ ಬೆಂಬಲ: ಬರ ಪರಿಸ್ಥಿತಿ ಮನವರಿಕೆ ಮಾಡಲಿ ಎಂದ ನಟ

ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

Video: ಕಾವೇರಿ ಹೋರಾಟ: ಬೆಂಗಳೂರು ಬಂದ್‌– ಬಿಕೋ ಎನ್ನುತ್ತಿರುವ ರಸ್ತೆಗಳು

ಪ್ರತಿಭಟನೆಗೆ ಸೀಮಿತವಾದ ರಾಮನಗರ ಬಂದ್: ರಸ್ತೆಗೆ ರಕ್ತ ಚೆಲ್ಲಿ ಆಕ್ರೋಶ

ರಾಮನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ರಾಮನಗರದಲ್ಲಿ ಮಂಗಳವಾರ ರೈತ, ಕನ್ನಡಪರ ಹಾಗೂ ಇತರ ಸಂಘಟನೆಗಳ ಬಂದ್ ನಡೆಸಿದ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು, ರಸ್ತೆಗೆ ತಮ್ಮ ರಕ್ತ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು

ಇದೇ 28ರಿಂದ ಅಕ್ಟೋಬರ್ 15ರವರೆಗೆ ಕರ್ನಾಟಕ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಬೇಕಿದೆ. ಮಂಗಳವಾರ ನಡೆದ ಸಮಿತಿಯ ಸಭೆಯಲ್ಲಿ ಈ ಶಿಫಾರಸು ಮಾಡಲಾಗಿದೆ. ಪ್ರತಿದಿನ 12,500 ಕ್ಯೂಸೆಕ್ ನೀರು ಹರಿಸುವಂತೆ ತಮಿಳುನಾಡು ಒತ್ತಾಯಿಸಿತ್ತು.

ಬೆಂಗಳೂರಿನ ಹೋಟೆಲ್‌ಗೆ ನುಗ್ಗಿ ಗಲಾಟೆ: ಪ್ರಕರಣ ದಾಖಲು

ಜಯನಗರ ಬಳಿಯ ‘ಉಡುಪಿ ಹಬ್’ ಹೋಟೆಲ್‌ಗೆ ನುಗ್ಗಿದ್ದ ಇಬ್ಬರು ಗಲಾಟೆ ಮಾಡಿದ್ದಾರೆ. ಹೋಟೆಲ್‌ನಲ್ಲಿದ್ದ ಗಾಜಿನ ಟೇಬಲ್‌ಗೆ ಕಲ್ಲಿನಿಂದ ಹೊಡೆದು ಪುಡಿ ಪುಡಿ ಮಾಡಿದ್ದಾರೆ. ಆರೋಪಿಗಳ ಕೃತ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.