ADVERTISEMENT

ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ

ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2024, 16:26 IST
Last Updated 1 ನವೆಂಬರ್ 2024, 16:26 IST
<div class="paragraphs"><p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ</p></div>

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ

   

ಬೆಂಗಳೂರು: ಬ್ಯಾಗ್ ಪರಿಶೀಲನೆ ವೇಳೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯನ್ನು ನಿಂದಿಸಿ ಬೆದರಿಕೆಯೊಡ್ಡಿದ್ದ ಆರೋಪದ ಅಡಿ ಇಬ್ಬರ ವಿರುದ್ಧ ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕೆಐಎಎಲ್‌ನ ಸಿಐಎಸ್‌ಎಫ್ ವಿಭಾಗದ ಪ್ರದ್ಯುಮ್ನ ಕುಮಾರ್ ನೀಡಿರುವ ದೂರು ಆಧರಿಸಿ ಬಿಹಾರದ ಅಮನ್‌ರಾಜ್ (32), ಜಾರ್ಖಂಡ್‌ನ ಅದಿತಿ ಕುಮಾರಿ (28) ವಿರುದ್ಧ ಪ್ರಕರಣ ದಾಖಲಾಗಿದೆ.

ADVERTISEMENT

‘ಅ.29ರಂದು ಇಂಡಿಗೊ ವಿಮಾನದಲ್ಲಿ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಬ್ಯಾಗ್‌ಗಳ ಸ್ಕ್ರೀನಿಂಗ್‌ ವೇಳೆ ಅನುಮಾನಾಸ್ಪದ ವಸ್ತು ಪತ್ತೆಯಾಗಿತ್ತು. ಬ್ಯಾಗ್ ಅನ್ನು ಕೆಐಎಎಲ್ ಸಿಬ್ಬಂದಿ ಖುದ್ದು ತಪಾಸಣೆ ಮಾಡಲು ಮುಂದಾದ ವೇಳೆ ಆರೋಪಿಗಳು ಸಹಕರಿಸದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬೆದರಿಕೆವೊಡ್ಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು’ ಎಂದು ಪೊಲೀಸರು ತಿಳಿಸಿದರು.

‘ವಿಮಾನ ನಿಲ್ದಾಣದ ಸಿಬ್ಬಂದಿ ಈ ವಿಚಾರವನ್ನು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಆರೋಪಿಗಳ ಬ್ಯಾಗ್‌ ಪರಿಶೀಲಿಸಿದಾಗ ಲೈಟರ್ ಪತ್ತೆ ಆಗಿತ್ತು’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.