ADVERTISEMENT

ಪೀಸ್‌ ಆಟೊ ಸಂಘಟನೆಯ ಅಧ್ಯಕ್ಷರಿಗೆ ಜೀವ ಬೆದರಿಕೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 15:07 IST
Last Updated 4 ಸೆಪ್ಟೆಂಬರ್ 2024, 15:07 IST
<div class="paragraphs"><p>ಪ್ರತಿಭಟನೆ</p></div>

ಪ್ರತಿಭಟನೆ

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಪೀಸ್‌ ಆಟೊ’ ಸಂಘಟನೆಯ ಅಧ್ಯಕ್ಷ ರಘು ನಾರಾಯಣಗೌಡರಿಗೆ ಬೈಕ್‌ ಟ್ಯಾಕ್ಸಿ ವೆಲ್ಫೇರ್‌ ಅಸೋಸಿಯೇಶನ್‌ ಸದಸ್ಯರು ಕೊಲೆ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಆಟೊ ಚಾಲಕರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟಿಸಿದರು.

ADVERTISEMENT

‘ಬೈಕ್‌ ಟ್ಯಾಕ್ಸಿಗಳವರು ನಿಯಮ ಮೀರಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದು, ಇದರಿಂದ ಆಟೊರಿಕ್ಷಾ ಚಾಲಕರಿಗೆ ದುಡಿಮೆ ಇಲ್ಲದಂತಾಗಿದೆ. ಅನಧಿಕೃತ ಬೈಕ್‌ ಟ್ಯಾಕ್ಸಿಗಳ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಕೊಲೆ ಬೆದರಿಕೆ ಹಾಕಲಾಗಿದೆ. ‘ಡಿ ಬಾಸ್‌ ಮಾಡಿದಂತೆ ಮರ್ಡರ್‌ ಮಾಡಬೇಕು’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ’ ಎಂದು ಪ್ರತಿಭಟಕಾರರು ಆರೋಪಿಸಿದರು.

‘ಜೀವ ಬೆದರಿಕೆ ಒಡ್ಡಿದವರನ್ನು ಮತ್ತು ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಬೈಕ್‌ ಟ್ಯಾಕ್ಸಿ ವೆಲ್ಫೇರ್‌ ಅಸೋಸಿಯೇಶನ್‌ ಪದಾಧಿಕಾರಿಗಳನ್ನು ಬಂಧಿಸಬೇಕು. ಅನಧಿಕೃತ ಬೈಕ್‌ ಟ್ಯಾಕ್ಸಿಗಳನ್ನು ನಿಷೇಧಿಸಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.