ADVERTISEMENT

Bengaluru Metro | ಮೆಟ್ರೊ ಹಳಿಗೆ ಬಿದ್ದ ಮರದ ಕೊಂಬೆ: ಸಂಚಾರ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 3:53 IST
Last Updated 16 ಅಕ್ಟೋಬರ್ 2024, 3:53 IST
<div class="paragraphs"><p>ಹಳೆ ಕೊಂಬೆ ಬಿದ್ದಿರುವುದು</p></div>

ಹಳೆ ಕೊಂಬೆ ಬಿದ್ದಿರುವುದು

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ನಮ್ಮ ಮೆಟ್ರೊ (Bengaluru Metro) ನೇರಳೆ ಮಾರ್ಗದಲ್ಲಿ ಬುಧವಾರ ಬೆಳಿಗ್ಗೆ ಸ್ವಾಮಿ ವಿವೇಕಾನಂದ ರಸ್ತೆ ಹಾಗೂ ಇಂದಿರಾನಗರ ನಿಲ್ದಾಣಗಳ ನಡುವೆ ಮರದ ಕೊಂಬೆ ತುಂಡಾಗಿ ಹಳಿ ಮೇಲೆ ಬಿದ್ದಿದೆ. ಇದರಿಂದ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯವಾಗಿದೆ.

ADVERTISEMENT

ಬೆಳಿಗ್ಗೆ 6.15 ಗಂಟೆ ಸುಮಾರಿಗೆ ಕೊಂಬೆ ಬಿದ್ದಿದ್ದು, ಈ ಮಾರ್ಗದಲ್ಲಿ ಕೆಲ ಹೊತ್ತು ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ಬಳಿಕ ಬೈಯಪ್ಪನಹಳ್ಳಿ- ವೈಟ್ ಫೀಲ್ಡ್‌ ನಡುವೆ ಹಾಗೂ ಎಂ ಜಿ ರಸ್ತೆ- ಚಲ್ಲಘಟ್ಟ ನಡುವೆ ರೈಲು ಸಂಚಾರ ಆರಂಭಗೊಂಡಿತು. ಎಂ. ಜಿ. ರಸ್ತೆ- ಬೈಯಪನಹಳ್ಳಿ ನಡುವೆ ಸ್ಥಗಿತಗೊಳಿಸಲಾಗಿದೆ.

ಮಳೆಯ ನಡುವೆ ಮರದ ಕೊಂಬೆ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.