ಬೆಂಗಳೂರು: ನಮ್ಮ ಮೆಟ್ರೊದ (Bengaluru Metro) ನೇರಳೆ ನೇರಳೆ ಮಾರ್ಗದ ಹಳಿಯಲ್ಲಿ ಬಿದ್ದಿದ್ದ ಮರದ ಕೊಂಬೆಯನ್ನು ತೆರವುಗೊಳಿಸಲಾಗಿದ್ದು, ರೈಲು ಸೇವೆಗಳು ಪುನರಾರಂಭಗೊಂಡಿವೆ.
ಸತತ ಎರಡು ಗಂಟೆ ಕಾರ್ಯಾಚರಣೆ ನಡೆಸಿದ ಬಿಎಂಆರ್‌ಸಿಎಲ್ ಸಿಬ್ಬಂದಿ ಮರದ ಕೊಂಬೆಯನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ನೇರಳೆ ಮಾರ್ಗದ ಸ್ವಾಮಿ ವಿವೇಕಾನಂದ ರಸ್ತೆ ಹಾಗೂ ಇಂದಿರಾನಗರ ನಿಲ್ದಾಣದ ನಡುವೆ ಮರದ ಕೊಂಬೆ ತುಂಡಾಗಿ ಹಳಿ ಮೇಲೆ ಬಿದ್ದಿತ್ತು.
ಬುಧವಾರ ಬೆಳಿಗ್ಗೆ 6.15 ಗಂಟೆ ಸುಮಾರಿಗೆ ಕೊಂಬೆ ಬಿದ್ದಿದ್ದು, ಈ ಮಾರ್ಗದಲ್ಲಿ ಕೆಲ ಹೊತ್ತು ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ಬಳಿಕ ಬೈಯಪ್ಪನಹಳ್ಳಿ- ವೈಟ್ ಫೀಲ್ಡ್ ನಡುವೆ ಹಾಗೂ ಎಂ ಜಿ ರಸ್ತೆ- ಚಲ್ಲಘಟ್ಟ ನಡುವೆ ರೈಲು ಸಂಚಾರ ಆರಂಭಗೊಂಡಿತು. ಎಂ. ಜಿ. ರಸ್ತೆ- ಬೈಯಪನಹಳ್ಳಿ ನಡುವೆ ಸ್ಥಗಿತಗೊಳಿಸಲಾಗಿತ್ತು.
ಮಳೆಯ ನಡುವೆಯೇ ಬಿಎಂಆರ್‌ಸಿಎಲ್ ಸಿಬ್ಬಂದಿ ಮರದ ಕೊಂಬೆ ತೆರವು ಕಾರ್ಯಾಚರಣೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.