ಬೆಂಗಳೂರು: ‘ಇನ್‌ಸ್ಟಾಗ್ರಾಂ ಸ್ಟಾರ್’ ಎಂದು ಪರಿಚಿತನಾಗಿರುವ ಜರ್ಮನಿಯ ಯೂನೀಸ್ ಝರೂರಾ ಅವರನ್ನು ಅನುಮತಿ ಪಡೆಯದೆ ಜನರ ಗುಂಪು ಸೇರಿಸಿದ್ದ ಆರೋಪದ ಅಡಿ ಅಶೋಕನಗರ ಠಾಣೆ ಪೊಲೀಸರು ಗುರುವಾರ ವಶಕ್ಕೆ ಪಡೆದು, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
‘ಯೂನೀಸ್ ಝರೂರಾ ವಿವಿಧ ದೇಶಗಳಿಗೆ ತೆರಳಿ ಅಚ್ಚರಿಯ ಉಡುಗೊರೆ ನೀಡುತ್ತಾರೆ. ಅವರು ಕೆಲವು ಪ್ರಶ್ನೆ ಕೇಳಿ ಸರಿಯಾದ ಉತ್ತರ ನೀಡಿದವರಿಗೆ ದುಬಾರಿ ಬೆಲೆಯ ಐ–ಫೋನ್ ಕೊಡುತ್ತಾರೆ ಎಂದು ಹೇಳಲಾಗಿದೆ. ಅವರು ಗುರುವಾರ ಮಹಾತ್ಮ ಗಾಂಧಿ ರಸ್ತೆಗೆ ಬಂದಿದ್ದರು. ಅದೇ ವೇಳೆ ಅವರ ಅಭಿಮಾನಿಗಳೂ ಜಮಾವಣೆಗೊಂಡಿದ್ದರು. ಇದರಿಂದ ಸಾರ್ವಜನಿಕರಿಗೆ ತೊಂದರೆ ಆಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದಿದ್ದರು. ಅನುಮತಿ ಪಡೆಯದೆ ಜನರ ಗುಂಪು ಸೇರಿಸಿದ್ದರಿಂದ ಪೊಲೀಸರು ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು, ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.