ಬೆಂಗಳೂರು: ಕೇಂದ್ರ ವಾಣಿಜ್ಯ ಪ್ರದೇಶದಲ್ಲಿರುವ (ಸಿಬಿಡಿ) ಹಲವು ಪಬ್‌ಗಳ ಮೇಲೆ ಕೇಂದ್ರ ವಿಭಾಗದ ಪೊಲೀಸರು ಶುಕ್ರವಾರ ರಾತ್ರಿ ದಾಳಿ ಮಾಡಿದ್ದು, ನಿಯಮ ಉಲ್ಲಂಘನೆ ಆರೋಪದಡಿ 20 ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಚರ್ಚ್‌ಸ್ಟ್ರೀಟ್, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಸುತ್ತಮುತ್ತಲಿನ ಹಲವು ಪಬ್‌ಗಳಿಂದ ನಿಯಮ ಉಲ್ಲಂಘನೆ ಆಗುತ್ತಿರುವ ಬಗ್ಗೆ ದೂರುಗಳು ಬಂದಿದ್ದವು. ವಿಶೇಷ ತಂಡಗಳನ್ನು ರಚಿಸಿ, ಎಲ್ಲ ಪಬ್‌ಗಳ ಮೇಲೆ ದಾಳಿ ಮಾಡಿ ಪರಿಶೀಲಿಸಲಾಯಿತು’ ಎಂದು ಪೊಲೀಸರು ಹೇಳಿದರು.
‘13 ಪಬ್‌ಗಳು ತಡರಾತ್ರಿ 1 ಗಂಟೆ ಬಳಿಕವೂ ತೆರೆದಿದ್ದವು. ಅಂಥ ಪಬ್‌ಗಳ ವಿರುದ್ಧ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಸಂಬಂಧಪಟ್ಟವರಿಗೆ ನೋಟಿಸ್ ನೀಡಲಾಗಿದೆ’ ಎಂದು ತಿಳಿಸಿದರು.
‘ಎರಡು ಪಬ್‌ಗಳಲ್ಲಿ ವಿದೇಶಿ ಮಹಿಳೆಯರಿಬ್ಬರನ್ನು ಅಕ್ರಮವಾಗಿ ಬಳಸಿಕೊಳ್ಳಲಾಗುತ್ತಿತ್ತು. ಇಬ್ಬರೂ ಮಹಿಳೆಯರನ್ನು ರಕ್ಷಿಸಲಾಗಿದೆ. ಎರಡೂ ಪಬ್‌ಗಳ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಿ
ಕೊಳ್ಳಲಾಗಿದೆ. ಸ್ಥಳೀಯರಿಗೆ ತೊಂದರೆ ಉಂಟು ಮಾಡುತ್ತಿದ್ದ 5 ಪಬ್‌ಗಳ ವಿರುದ್ಧವೂ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.