ಬೆಂಗಳೂರು: ನಗರದಲ್ಲಿ ನಿರಂತರ ಮಳೆಯಿಂದ ಐಟಿ ಕಂಪನಿಗಳು ಸೇರಿದಂತೆ ಉದ್ಯಮಗಳ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದ್ದು, ಇದಕ್ಕೆ ಪರಿಹಾರ ಕಲ್ಪಿಸಲು ‘ಸಮಾಲೋಚನಾ ಸಮಿತಿ’ ರಚಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಹಲವು ಟೆಕ್‌ಪಾರ್ಕ್‌ಗಳಲ್ಲಿರುವ ಸಂಸ್ಥೆಗಳು ಎದುರಿಸುತ್ತಿರುವ ಸವಾಲು, ಸಮಸ್ಯೆಗಳಿಗೆ ಪ್ರಾಮುಖ್ಯ ನೀಡಿ ಬಗೆಹರಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ‘ಸಮಾಲೋಚನಾ ಸಮಿತಿ’ ರಚಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಈ ಸಮಿತಿ ರಚಿಸಲಾಗಿದೆ. ಐಟಿ, ಬಿಟಿ ಮತ್ತು ಸ್ಟಾರ್ಟ್‌ಅಪ್ ವಿಷನ್ ಗ್ರೂಪ್‌ಗಳ ಮುಖ್ಯಸ್ಥರು ಸಮಿತಿಯಲ್ಲಿರಲಿದ್ದಾರೆ ಎಂದಿದ್ದಾರೆ.
ಸಮಾಲೋಚನಾ ಸಮಿತಿ: ಅಧ್ಯಕ್ಷ– ಉಪ ಮುಖ್ಯಮಂತ್ರಿ, ಉಪಾಧ್ಯಕ್ಷ– ಮಾಹಿತಿ ತಂತ್ರಜ್ಞಾನ ಸಚಿವ, ಸದಸ್ಯರು– ಕಿಯೊನಿಕ್ಸ್ ಅಧ್ಯಕ್ಷ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಮುಖ್ಯ ಆಯುಕ್ತ, ನಗರ ಪೊಲೀಸ್ ಕಮಿಷನರ್, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಇಲಾಖೆ ಕಾರ್ಯದರ್ಶಿ, ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ, ಸದಸ್ಯ ಕಾರ್ಯದರ್ಶಿ– ಬಿಬಿಎಂಪಿ ಪ್ರಧಾನ ಎಂಜಿನಿಯರ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.