ADVERTISEMENT

ಬೆಂಗಳೂರು ನಗರದಲ್ಲಿ ಮುಂಜಾನೆ ಮಂಜು, ಚಳಿ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2024, 16:05 IST
Last Updated 12 ನವೆಂಬರ್ 2024, 16:05 IST
<div class="paragraphs"><p>ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆ ಬಳಿ ಮಂಗಳವಾರ ಮುಂಜಾನೆ ಮಂಜು ಮುಸುಕಿದ ವಾತಾವರಣವಿತ್ತು&nbsp; ಪ್ರಜಾವಾಣಿ </p></div>

ವಿಮಾನ ನಿಲ್ದಾಣ ಸಂಪರ್ಕಿಸುವ ಮೇಲ್ಸೇತುವೆ ಬಳಿ ಮಂಗಳವಾರ ಮುಂಜಾನೆ ಮಂಜು ಮುಸುಕಿದ ವಾತಾವರಣವಿತ್ತು  ಪ್ರಜಾವಾಣಿ

   

ಚಿತ್ರ: ಬಿ.ಕೆ. ಜನಾರ್ದನ್

ಬೆಂಗಳೂರು: ನಗರದಲ್ಲಿ ಮುಂಜಾನೆ ಅವಧಿಯಲ್ಲಿ ವಾತಾವರಣವನ್ನು ಮಂಜು ಆವರಿಸಿಕೊಳ್ಳುತ್ತಿದ್ದು, ಚಳಿ ಕಾಣಿಸಿಕೊಳ್ಳುತ್ತಿದೆ. 

ADVERTISEMENT

ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತವು ನಗರದ ಮೇಲೂ ಪರಿಣಾಮ ಬೀರಿದ್ದು, ಮಂಗಳವಾರ ಬಹುತೇಕ ಅವಧಿ ಮೋಡ ಕವಿದ ವಾತಾವರಣವಿತ್ತು. ಮುಂಜಾನೆ ಬಹುತೇಕ ಸ್ಥಳಗಳಲ್ಲಿ ಮಂಜು ಕಾಣಿಸಿಕೊಂಡಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಗಿತ್ತು.

ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಸಹಿತ ಆಗಾಗ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ತಾಪಮಾನ ಕುಸಿಯುತ್ತಿದೆ. ಸಂಜೆ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇದ್ದರೆ, ಮುಂಜಾನೆ ಅವಧಿಯಲ್ಲಿ ಮಂಜು ಮುಸುಕುತ್ತಿದೆ. ಇದರಿಂದಾಗಿ ಬೆಳಿಗ್ಗೆ ಹಾಗೂ ಸಂಜೆಯ ಕೆಲವು ಸಮಯ ಚಳಿಯ ಅನುಭವ ಆಗುತ್ತಿದೆ.  

ಹವಾಮಾನ ಇಲಾಖೆಯ ಪ್ರಕಾರ ಕಳೆದೊಂದು ವಾರದಿಂದ ಸರಾಸರಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ವರದಿಯಾಗುತ್ತಿದೆ. 

ನಗರದಲ್ಲಿ ಬುಧವಾರ ಹಾಗೂ ಗುರುವಾರ ಮೋಡ ಕವಿದ ವಾತಾವರಣ ಇರಲಿದ್ದು, ಜಿಟಿಜಿಟಿ ಮಳೆಯಾಗುವ ಸಾಧ್ಯತೆಯಿದೆ. ಶುಕ್ರವಾರ ಹಾಗೂ ಶನಿವಾರ ಸಾಧರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.