ADVERTISEMENT

ಬೆಂಗಳೂರು | ಕಮಲಾನಗರ: 3 ಅಂತಸ್ತಿನ ಕಟ್ಟಡ ಕುಸಿಯುವ ಭೀತಿ, ನಿವಾಸಿಗಳ ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 0:00 IST
Last Updated 25 ಅಕ್ಟೋಬರ್ 2024, 0:00 IST
123
123   

ಬೆಂಗಳೂರು: ಕಮಲಾನಗರ 3ನೇ ಮುಖ್ಯರಸ್ತೆಯ ಬಳಿಯ ನೀರುಗಾಲುವೆಗೆ ಹೊಂದಿಕೊಂಡಂತಿರುವ ಮೂರು ಅಂತಸ್ತಿನ ಕಟ್ಟಡ ಉರುಳುವ ಸಾಧ್ಯತೆ ಇದ್ದು, ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.

ಪಶ್ಚಿಮ ವಲಯದ ಮಹಾಲಕ್ಷ್ಮೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಲಾನಗರದಲ್ಲಿ ತಳಪಾಯದ ಗೋಡೆ ಶೇ 20 ರಷ್ಟು ಕುಸಿದಿದ್ದು, ಶುಕ್ರವಾರ ತೆರವು ಕಾರ್ಯವನ್ನು ಪ್ರಾರಂಭಿಸಲಾಗುವುದು ಎಂದು ವಲಯ ಆಯುಕ್ತೆ ಅರ್ಚನಾ ತಿಳಿಸಿದ್ದಾರೆ.

ಮೂರು ಅಂತಸ್ತಿನ ಮನೆಯನ್ನು, ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿದೆ. ತಳಭಾಗದಲ್ಲಿ ದ್ವಿತೀಯ ನೀರು ಗಾಲುವೆಯ ಮೂಲಕ ಬರುವ ನೀರು ಮನೆಯ ತಳಪಾಯಕ್ಕೆ ಹೋಗಿದೆ. ಇದರಿಂದ, ತಳಪಾಯದ ನೀರಿನ ಸಂಪ್ ಹಾಗೂ ತಳಪಾಯದ ಗೋಡೆ ಕುಸಿದಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಮೂರು ಅಂತಸ್ತಿನ ಕಟ್ಟಡದಲ್ಲಿ 5 ಮನೆಗಳಿದ್ದು, ಎಲ್ಲಾ ಮನೆಗಳನ್ನು ಬಾಡಿಗೆಗೆ ನೀಡಲಾಗಿರುತ್ತದೆ. ಮನೆಗಳಲ್ಲಿದ್ದ ಎಲ್ಲರನ್ನು ಸ್ಥಳಾಂತರಿಸಲಾಗಿದ್ದು, ಸಾಮಗ್ರಿಗಳನ್ನು ಹೊರ ತೆಗೆಯಲಾಗಿದೆ. 5 ಕುಟುಂಬಗಳ ಪೈಕಿ, 3 ಕುಟುಂಬಗಳು ಸಂಬಂಧಿಕರ ಮನೆಗೆ ತೆರಳಿದ್ದು, ಒಂದು ಕುಟುಂಬ ಅಂಬೇಡ್ಕರ್ ಭವನ, ಇನ್ನೊಂದು ಕುಟುಂಬ ದೇವಸ್ಥಾನದಲ್ಲಿ ತಂಗಿದ್ದು, ಅವರಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.