ADVERTISEMENT

ಸರಣಿ ಅಪಘಾತ ಪ್ರಕರಣ: ಸಿಸಿಟಿವಿ ಕ್ಯಾಮೆರಾ ಪರಿಶೀಲನೆ

ನಲಪಾಡ್‍ ಕಾರು ಚಲಾಯಿಸುತ್ತಿದ್ದ ಬಗ್ಗೆ ಪುರಾವೆ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 20:11 IST
Last Updated 13 ಫೆಬ್ರುವರಿ 2020, 20:11 IST
   

ಬೆಂಗಳೂರು: ಮೇಖ್ರಿ ವೃತ್ತದ ಕೆಳಸೇತುವೆ ಬಳಿ ಫೆ. 9ರಂದು ಸರಣಿ ಅಪಘಾತಕ್ಕೆ ಕಾರಣವಾಗಿದ್ದ ಬೆಂಟ್ಲಿ ಕಾರನ್ನು ಮೊಹಮದ್‌ ನಲಪಾಡ್‍ ಅವರೇ ಚಲಾಯಿಸುತ್ತಿದ್ದರು ಎನ್ನುವುದಕ್ಕೆ ಪುರಾವೆ ಸಂಗ್ರಹಿಸಲು ಸದಾಶಿವನಗರ ಸಂಚಾರ ಠಾಣೆ ಪೊಲೀಸರು ಮುಂದಾಗಿದ್ದಾರೆ.

ಬಳ್ಳಾರಿ ರಸ್ತೆಯಲ್ಲಿ ಮೇಖ್ರಿ ವೃತ್ತದ ಕಡೆಗೆ ಬೆಂಟ್ಲಿ ಕಾರು ಬರುತ್ತಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ದೇವನಹಳ್ಳಿ ವಿಮಾನ ನಿಲ್ದಾಣದ ಬಳಿ ಇರುವ ಟೋಲ್‌ಗೇಟ್‌ನಿಂದ ಮೇಖ್ರಿ ವೃತ್ತದವರೆಗೆ ರಸ್ತೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ದೃಶ್ಯಗಳನ್ನು ಈಗಾಗಲೇ ಪೊಲೀಸರು ಸಂಗ್ರಹಿಸಿದ್ದಾರೆ.

ನಲಪಾಡ್ ಅವರ ಮೊಬೈಲ್‌, ಅಪಘಾತ ಸಂಭವಿಸಿದ ಸಮಯದಲ್ಲಿ ಮೇಖ್ರಿ ವೃತ್ತದ ಬಳಿ ತೋರಿಸುತ್ತಿತ್ತು. ಪ್ರತ್ಯಕ್ಷ ಸಾಕ್ಷಿದಾರರೊಬ್ಬರ ಹೇಳಿಕೆ ಆಧರಿಸಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ನಲಪಾಡ್ ಚಲಾಯಿಸುತ್ತಿದ್ದಾಗಲೇ ಅಪಘಾತ ಸಂಭವಿಸಿರುವ ಬಗ್ಗೆ ಸಾಕ್ಷ್ಯ ಸಿಕ್ಕಿದ್ದರಿಂದ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.