ADVERTISEMENT

ಬೆಸ್ಕಾಂ ಸಹಾಯವಾಣಿಗೆ ಪರ್ಯಾಯ ವಾಟ್ಸ್‌ಆ್ಯಪ್ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 7 ಮೇ 2024, 14:30 IST
Last Updated 7 ಮೇ 2024, 14:30 IST
<div class="paragraphs"><p>&nbsp;ಸಾಂದರ್ಭಿಕ ಚಿತ್ರ</p></div>

 ಸಾಂದರ್ಭಿಕ ಚಿತ್ರ

   

ಬೆಂಗಳೂರು: ಬೆಸ್ಕಾಂ ಸಹಾಯವಾಣಿಗೆ (1912) ವಿಪರೀತ ಕರೆಗಳು ಬರುತ್ತಿರುವುದರಿಂದ ಉಂಟಾಗುತ್ತಿರುವ ಒತ್ತಡವನ್ನು ನಿವಾರಿಸಲು ಬೆಸ್ಕಾಂ ವ್ಯಾಪ್ತಿಯ ಪ್ರತಿ ಜಿಲ್ಲೆಗೆ ಪರ್ಯಾಯ ವಾಟ್ಸ್‌ಆ್ಯಪ್‌ ಸಂಖ್ಯೆಯನ್ನು ಒದಗಿಸಲಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಮೂರು ದಿನಗಳಿಂದ ಗಾಳಿ-ಮಳೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ಹಲವಾರು ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಈ ಸಂಬಂಧ ಬೆಸ್ಕಾಂ ಸಹಾಯವಾಣಿಗೆ ನಿರಂತವಾಗಿ ದೂರುಗಳು ಹರಿದು ಬರುತ್ತಿವೆ.

ಹೀಗಾಗಿ, ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ನೀಡಿರುವ ಪರ್ಯಾಯ ವಾಟ್ಸ್‌ಆ್ಯಪ್‌ ಸಂಖ್ಯೆಗಳನ್ನು ಗ್ರಾಹಕರು ಬಳಸಿಕೊಳ್ಳಲು ಕೋರಿದ್ದಾರೆ.

ವಾಟ್ಸ್‌ಆ್ಯಪ್‌ ಸಂಖ್ಯೆಗಳಿಗೆ ಗ್ರಾಹಕರು ಸ್ವವಿಳಾಸದೊಂದಿಗೆ ಸಂದೇಶ ಹಾಗೂ ಛಾಯಾಚಿತ್ರಗಳನ್ನು ಕಳುಹಿಸಿ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದು. ಹಾಗೆಯೇ ಎಸ್‌ಎಂಎಸ್‌ಗಳನ್ನು ಕಳುಹಿಸಲು ಬೆಂಗಳೂರು ಮಹಾನಗರ ವ್ಯಾಪ್ತಿಯ ಬೆಸ್ಕಾಂ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಕೊಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಜಿಲ್ಲಾವಾರು ವಾಟ್ಸ್‌ಆ್ಯಪ್‌:

ಬೆಂಗಳೂರು ಪೂರ್ವ- 8277884013, ಬೆಂಗಳೂರು ಪಶ್ಚಿಮ- 8277884012, ಬೆಂಗಳೂರು ಉತ್ತರ- 8277884014, ಬೆಂಗಳೂರು ದಕ್ಷಿಣ- 8277884011. ಕೋಲಾರ- 8277884015, ಚಿಕ್ಕಬಳ್ಳಾಪುರ- 8277884016, ಬೆಂಗಳೂರು ಗ್ರಾಮಾಂತರ- 8277884017, ರಾಮನಗರ- 8277884018, ತುಮಕೂರು- 8277884019, ಚಿತ್ರದುರ್ಗ- 8277884020 ಹಾಗೂ ದಾವಣಗೆರೆ- 8277884021. ಸುರಕ್ಷತೆಗೆ ಸಂಬಂಧಿಸಿದ ದೂರುಗಳಿಗೆ ವಾಟ್ಸ್‌ ಆಪ್‌ ಸಂಖ್ಯೆ - 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್‌ಆ್ಯಪ್‌ ಸಂಖ್ಯೆ- 9449844640.

ಎಸ್‌ಎಂಎಸ್‌ ಮಾತ್ರ:

9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.