ಯಲಹಂಕ: ಲಾಟರಿ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಿ.ಎಸ್.ಅನಿಲ್‌ಕುಮಾರ್ ಬೆಟ್ಟಹಲಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 26 ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ 9 ಮಂದಿ ಬಿಜೆಪಿ ಬೆಂಬಲಿತ, 17 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿ ದ್ದಾರೆ. ಇದುವರೆಗೂ ಪಂಚಾಯಿತಿಯು ಕಾಂಗ್ರೆಸ್ ತೆಕ್ಕೆಯಲ್ಲಿತ್ತು.
ನೂತನ ಅಧ್ಯಕ್ಷರ ಆಯ್ಕೆಗಾಗಿ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ರಾಮ ಮೂರ್ತಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಅನಿಲ್‌ಕುಮಾರ್ ನಾಮಪತ್ರ ಸಲ್ಲಿಸಿದ್ದರು. ಅನಿರೀಕ್ಷಿತ ಬೆಳವಣಿಗೆಯಲ್ಲಿ ಕಾಂಗ್ರೆಸ್ ಬೆಂಬಲಿತ ನಾಲ್ವರು, ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ಚಲಾಯಿಸಿದರು. ಇಬ್ಬರಿಗೂ ತಲಾ 13 ಮತಗಳು ಚಲಾವಣೆಯಾಗಿ ಸಮಬಲದ ಫಲಿತಾಂಶ ಹೊರಬಿದ್ದಿತು. ಅಂತಿಮವಾಗಿ ಲಾಟರಿ ಪ್ರಕ್ರಿಯೆ ಮೂಲಕ ಅಧ್ಯಕ್ಷರ ಆಯ್ಕೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.