ADVERTISEMENT

ಬೆಟ್ಟಹಲಸೂರು ಗ್ರಾ.ಪಂ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 21:39 IST
Last Updated 16 ಜುಲೈ 2024, 21:39 IST
ಹೇಮಾವತಿ ಎಸ್‌.ನಾಗರಾಜು
ಹೇಮಾವತಿ ಎಸ್‌.ನಾಗರಾಜು   

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಹೇಮಾವತಿ ಎಸ್‌. ನಾಗರಾಜು ಹಾಗೂ ಉಪಾಧ್ಯಕ್ಷರಾಗಿ ಬಿ.ಆರ್‌.ಪ್ರವೀಣ್‌ ಆಯ್ಕೆಯಾಗಿದ್ದಾರೆ.

ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಯಾಗಿ ಪ್ರೇಮಾ ಚಂದ್ರಮೂರ್ತಿ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹೇಮಾವತಿ ನಾಗರಾಜು ನಾಮಪತ್ರ ಸಲ್ಲಿಸಿದ್ದರು. ಒಟ್ಟು 26 ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ ಹೇಮಾವತಿ 13 ಹಾಗೂ ಪ್ರೇಮಾ 12 ಮತಗಳನ್ನು ಪಡೆದರು. ಒಂದು ಮತ ತಿರಸ್ಕೃತವಾಯಿತು.

ಉಪಾಧ್ಯಕ್ಷರ ಸ್ಥಾನಕ್ಕಾಗಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಆರ್‌.ಪ್ರವೀಣ್‌ 14 ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಆರ್‌.ರಾಮಾಂಜಿನಿ 12 ಮತಗಳನ್ನು ಪಡೆದರು.

ADVERTISEMENT
ಬಿ.ಆರ್‌. ಪ್ರವೀಣ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.