ನವದೆಹಲಿ: ಭಾರತೀಯ ಸೇನೆ, ನೌಕಾ ಪಡೆ ಹಾಗೂ ವಾಯುಪಡೆಗಾಗಿ ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಸ್ವದೇಶಿಯಾಗಿ ಅಭಿವೃದ್ಧಿಪಡಿಸಿರುವ ಡ್ರೋನ್ ನಿಗ್ರಹ ವ್ಯವಸ್ಥೆಯನ್ನು ತಯಾರಿಸಿಕೊಡಲಿದೆ.
ನೌಕಾಪಡೆಯ ಡ್ರೋನ್ ನಿಗ್ರಹ ವ್ಯವಸ್ಥೆಯ (ಎನ್‌ಎಡಿಎಸ್) ಪೂರೈಕೆಗಾಗಿ ನೌಕಾಪಡೆಯು ಮಂಗಳವಾರ ಬಿಇಎಲ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಭಾರತೀಯ ಸೇನೆ ಮತ್ತು ವಾಯುಪಡೆ ಕೂಡ ಇದೇ ರೀತಿ ಒಪ್ಪಂದಕ್ಕೆ ಸಹಿಹಾಕಲಿವೆ. ಈ ತಂತ್ರಜ್ಞಾನವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದೆ.
ಎನ್‌ಎಡಿಎಸ್ ಲೇಸರ್ ಆಧರಿತ ತಂತ್ರಜ್ಞಾನದ ಮೂಲಕ ಸೂಕ್ಷ್ಮ ಡ್ರೊನ್‌ಗಳನ್ನು ಕೂಡ ಪತ್ತೆ ಹಚ್ಚಿ ನಾಶಪಡಿಸುವ ಸಾಮರ್ಥ್ಯ ಹೊಂದಿದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಈ ವರ್ಷದ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಮೊದಲ ಬಾರಿಗೆ ಈ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.