ಬೆಂಗಳೂರು: ‘ಭಾರತೀಯ ವಿದ್ಯಾ ಭವನವು ನಾಡಿನ ಕಲೆ ಸಂಸ್ಕೃತಿಯನ್ನು ಪಸರಿಸುವ ಮಹತ್ವದ ಕೆಲಸವನ್ನು ಮಾಡುತ್ತಿದೆ. ಪರಂಪರೆಯನ್ನು ಹೊಸ ಪೀಳಿಗೆಗೆ ಪರಿಚಯಿಸುತ್ತಿದೆ’ ಎಂದು ನಟಿ ಅನು ಪ್ರಭಾಕರ್ ಶ್ಲಾಘಿಸಿದರು.
ಭಾರತೀಯ ವಿದ್ಯಾಭವನದಲ್ಲಿ ಆರಂಭವಾದ ‘ನವರಾತ್ರಿ ಹಬ್ಬ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾಯಕಿಯಾಗಿ ಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಅನು ಪ್ರಭಾಕರ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಗೊಂಬೆಗಳ ಪ್ರದರ್ಶನ ರೂಪಿಸಿರುವ ಅಪರ್ಣಾ ಆಚಾರ್ಯ ಮತ್ತು ಶ್ರೀನಾಥ ಆಚಾರ್ಯ ಅವರು ‘ಶ್ರೀರಾಮ ಕಥಾ ದರ್ಶನ’ ಎಂಬ ರಾಮಾಯಣವನ್ನು ಬಿಂಬಿಸುವ ಗೊಂಬೆಗಳ ಪ್ರದರ್ಶನ’ದ ಮಹತ್ವ ಕುರಿತು ವಿವರಿಸಿದರು.
‘ರಾಮಾಯಣದ ಸ್ತ್ರೀ ಪಾತ್ರಗಳು’ ಕುರಿತು ಭಾರತೀಯ ವಿದ್ಯಾಭವನದ ಅಧ್ಯಕ್ಷ ಕೆ.ಜಿ. ರಾಘವನ್ ವಿಶೇಷ ಉಪನ್ಯಾಸ ನೀಡಿದರು.
ಗೊಂಬೆ ಪ್ರದರ್ಶನ ಪ್ರತಿದಿನ ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಮತ್ತು ಮಧ್ಯಾಹ್ನ 3ರಿಂದ ಸಂಜೆ 5.30ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತದೆ ಎಂದು ಭಾರತೀಯ ವಿದ್ಯಾ ಭವನದ ನಿರ್ದೇಶಕ ಎಚ್.ಎನ್. ಸುರೇಶ್ ತಿಳಿಸಿದರು. ಜಂಟಿ ನಿರ್ದೇಶಕಿ ನಾಗಲಕ್ಷ್ಮಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.