ಬೆಂಗಳೂರು: ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದ ಮೇಲೂ ತನ್ನ ಸಹಚರರ ಮೂಲಕ ಮಾದಕ ವಸ್ತುಗಳ ಪೂರೈಕೆ ದಂಧೆಯಲ್ಲಿ ತೊಡಗಿದ್ದ, ಬಿಹಾರದ ಪೆಡ್ಲರ್ ಅಖಿಲೇಶ್ ಕುಮಾರ್ನನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಎಎನ್ಡ್ಲ್ಯು ಅಧಿಕಾರಿಗಳು ಬಂಧಿಸಿದ್ದಾರೆ.
ಈತನ ವಿರುದ್ಧ ವೈಟ್ಫೀಲ್ಡ್, ಆಡುಗೋಡಿ, ಕಾಟನ್ಪೇಟೆ ಮತ್ತು ಚಾಮರಾಜಪೇಟೆ ಪೊಲೀಸ್ ಠಾಣೆಗಳಲ್ಲಿ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು.
ಆರೋಪಿ ಜಾಮೀನು ಪಡೆದು ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ನಂತರ, ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ತನ್ನ ಸಹಚರರ ಮೂಲಕ ಮಾದಕ ವಸ್ತುಗಳ ಪೂರೈಕೆಯಲ್ಲಿ ತೊಡಗಿದ್ದ. 2018ರಿಂದಲೂ ಆರೋಪಿ ಈ ದಂಧೆಯಲ್ಲಿ ತೊಡಗಿದ್ದ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.