ADVERTISEMENT

ಬೆಂಗಳೂರು | ಅಪಘಾತ: ದ್ವಿಚಕ್ರ ವಾಹನ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 16:22 IST
Last Updated 4 ಜುಲೈ 2024, 16:22 IST
<div class="paragraphs"><p>ಅಪಘಾತ –ಪ್ರಾತಿನಿಧಿಕ ಚಿತ್ರ</p></div>

ಅಪಘಾತ –ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ನೈಸ್‌ ರಸ್ತೆಯಲ್ಲಿ ದ್ವಿಚಕ್ರ ವಾಹನ ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ.

ಎಲೆಕ್ಟ್ರಾನಿಕ್‌ ಸಿಟಿಯ ನಿವಾಸಿ ಅಸ್ಲಂ (48) ಮೃತಪಟ್ಟವರು.

ADVERTISEMENT

‘ಅಸ್ಲಂ ಅವರು ರಿಯಲ್‌ ಎಸ್ಟೇಟ್‌ ಏಜೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಬುಧವಾರ ಮಧ್ಯಾಹ್ನ 1.30ಕ್ಕೆ ಅವರು ನೈಸ್‌ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ, ನೈಸ್‌ ಕಚೇರಿ ಹತ್ತಿರ ಹೊಸೂರು ರಸ್ತೆಯ ಕಡೆಗೆ ಎಡ ತಿರುವು ತೆಗೆದುಕೊಳ್ಳುವ ಸಂದರ್ಭದಲ್ಲಿ ತುಮಕೂರು ರಸ್ತೆಯ ಮೂಲಕ ಅತಿ ವೇಗವಾಗಿ ಬಂದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ, ಸವಾರ ರಸ್ತೆ ಮೇಲೆ ಬಿದ್ದಿದ್ದು ಅವರ ಮೇಲೆ ಲಾರಿಯ ಚಕ್ರ ಹರಿದಿದ್ದು, ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಮೃತದೇಹವನ್ನು ರಾಜರಾಜೇಶ್ವರಿನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಕೆಂಗೇರಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.