ADVERTISEMENT

ಕೆ.ಆರ್.ಪುರ | ಬಿಎಂಟಿಸಿ ಬಸ್‌ ಡಿಕ್ಕಿ: ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2024, 15:18 IST
Last Updated 31 ಆಗಸ್ಟ್ 2024, 15:18 IST
ಅಪಘಾತದಿಂದ ಬಸ್‌ನ ಮುಂಭಾಗಕ್ಕೆ ಹಾನಿಯಾಗಿದೆ.
ಅಪಘಾತದಿಂದ ಬಸ್‌ನ ಮುಂಭಾಗಕ್ಕೆ ಹಾನಿಯಾಗಿದೆ.   

ಕೆ.ಆರ್.ಪುರ: ಐಟಿಐ ಗೇಟ್‌ ಬಳಿ ಬಿಎಂಟಿಸಿ ಬಸ್ ಹಾಗೂ ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.

ಮೈಸೂರು ನಗರದ ಸುಪ್ರಿತ್ (33) ಮೃತಪಟ್ಟ ಸವಾರ.

ಸುಪ್ರಿತ್‌ ಅವರು ಕೆ.ಆರ್.ಪುರದ ನಿಸರ್ಗ ಬಡಾವಣೆಯಲ್ಲಿ ಪತ್ನಿ ಹಾಗೂ ಪುತ್ರಿಯ ಜೊತೆಗೆ ನೆಲೆಸಿದ್ದರು. ನಗರದ ಮಾಲ್ ಆಫ್ ಏಷಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ADVERTISEMENT

‘ರಾತ್ರಿ 9.20ರ ಸುಮಾರಿಗೆ ಹಳೆ ಮದ್ರಾಸ್ ರಸ್ತೆಯ ಐಟಿಐ ಗೇಟ್ ಮುಂಭಾಗದಲ್ಲಿ ಬುಲೆಟ್ ಬೈಕ್‌ನಲ್ಲಿ ಸುಪ್ರಿತ್‌ ತೆರಳುತ್ತಿದ್ದರು. ಅದೇ ವೇಳೆಯಲ್ಲಿ ಕೆ.ಆರ್.ಮಾರುಕಟ್ಟೆಯಿಂದ ಹೊಸಕೋಟೆಯತ್ತ ಬಸ್‌ ಹೊರಟಿತ್ತು. ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮುಂದೆ ಚಲಿಸುತ್ತಿದ್ದ ಲಾರಿಗೆ ಬೈಕ್ ಅಪ್ಪಳಿಸಿದೆ. ಸವಾರ ಬಸ್ ಮತ್ತು ಲಾರಿ ಮಧ್ಯೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ’ ಎಂದು ಸಂಚಾರ ಪೊಲೀಸರು ಹೇಳಿದರು.

‘ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.