ADVERTISEMENT

ಮತ ಕೇಳುವ ನೈತಿಕತೆ ಬಿಜೆಪಿಗಿಲ್ಲ: ಸಲೀಂ ಅಹಮದ್‌

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2024, 16:15 IST
Last Updated 13 ಏಪ್ರಿಲ್ 2024, 16:15 IST
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಆಲಿ ಖಾನ್ ಪರ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಮಾಕ್ಷಿಪಾಳ್ಯದಲ್ಲಿ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್‌ ಮತ ಯಾಚನೆ ನಡೆಸಿದರು
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಆಲಿ ಖಾನ್ ಪರ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಮಾಕ್ಷಿಪಾಳ್ಯದಲ್ಲಿ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್‌ ಮತ ಯಾಚನೆ ನಡೆಸಿದರು   

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಮಾಕ್ಷಿಪಾಳ್ಯದಲ್ಲಿ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್‌ ಮತಯಾಚನೆ ನಡೆಸಿದರು.

‘ಕೇಂದ್ರ ಸರ್ಕಾರದ ದುರಾಡಳಿತ, ಭ್ರಷ್ಟಾಚಾರದಿಂದ ಜನ ರೋಸಿಹೋಗಿದ್ದು, ಬದಲಾವಣೆ ಬಯಸಿದ್ದಾರೆ. ಜನರಿಗೆ ನೀಡಿದ್ದ ಆಶ್ವಾಸನೆಗಳನ್ನು ಬಿಜೆಪಿ ಸರ್ಕಾರ ಈಡೇರಿಸಿಲ್ಲ. ಹೀಗಾಗಿ, ಮತ ಕೇಳುವ ನೈತಿಕತೆಯನ್ನು ಬಿಜೆಪಿ ಕಳೆದುಕೊಂಡಿದೆ’ ಎಂದು ಸಲೀಂ ಹೇಳಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳು ಜಾರಿ ಆಗಿವೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ನಮ್ಮ ಸಂಕಲ್ಪ. ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರೂಪಿಸುವುದೇ ಉದ್ದೇಶ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರವೂ ಸೇರಿದಂತೆ ಈ ಬಾರಿಯ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಆರಾಧ್ಯ, ಕಾರ್ಯದರ್ಶಿ ಸುಧಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಜೊತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.